ಗಾಂಧಿನಗರ ವಿಧಾನಸಭಾ ಕ್ಷೇತ್ರ: ಜನಸಂಪರ್ಕ ಕಛೇರಿಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರುಗಳ ನೇಮಕಾತಿ ಆದೇಶ ಪತ್ರವನ್ನು ಸ್ಥಳೀಯ ಶಾಸಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಆದೇಶ ಪತ್ರಗಳನ್ನು ನೀಡಿದರು, ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಉಮೇಶ್ ರವರು ಉಪಸ್ಥಿತರಿದ್ದರು.
ಇದೇ ವೇಳೆ ಸಚಿವರು ಮಾತನಾಡಿ ಕಾಂಗ್ರೆಸ್ ಪಕ್ಷ ಬಡವರ ಪರ ಹೋರಾಟ ಮಾಡುವ ಪಕ್ಷ, ಕಾಂಗ್ರೆಸ್ ಪಕ್ಷದ ಸರ್ಕಾರ 5 ಗ್ಯಾರೆಂಟಿ ಯೋಜನೆಗಳಾದ ಗೃಹಲಕ್ಷ್ಮಿ,ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ, 200ಯೂನಿಟ್ ವಿದ್ಯುತ್ ಉಚಿತ ಹಾಗೂ ಯುವ ನಿಧಿ ಯೋಜನೆಯನ್ನು ರಾಜ್ಯಾದ್ಯಂತ ಸಮರ್ಪಕವಾಗಿ ಜಾರಿಗೆ ತಂದಿದೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಮನೆಗಳಿಗೆ ಅರ್ಹ ಫಲಾನುಭವಿಗಳಿಗೆ ಗ್ಯಾರೆಂಟಿ ಯೋಜನೆಗಳನ್ನು ತಲುಪಿಸಲಾಗಿದೆ.
ಪ್ರತಿ ಮನೆಗಳಿಗೆ ಗ್ಯಾರೆಂಟಿ ಯೋಜನೆಯ ಅಧ್ಯಕ್ಷರು , ಸದಸ್ಯರು ಭೇಟಿ ನೀಡಿ, ಯೋಜನೆಯ ಲಾಭ ತಲುಪಿದಿಯ ಮತ್ತು ಅರ್ಹ ಫಲಾನುಭವಿಗಳ ಹೆಸರುಗಳನ್ನು ನೋಂದಾಣೆ ಕಾರ್ಯ ಮಾಡಲಾಗುವುದು. ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನವಾಗಲು ದಿಟ್ಟ ಹೆಜ್ಜೆ ಇಡಲಾಗಿದೆ ಎಂದರು.