ಅಡಿಲೇಡ್ ಓವಲ್ನ ಹಗಲು- ರಾತ್ರಿ ಹೊನಲು ಬೆಳಕಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ನ ವೈಫಲ್ಯದಿಂದಾಗಿ ಹೀನಾಯ ಸೋಲು ಕಂಡಿರುವ ಭಾರತ ಕ್ರಿಕೆಟ್ ತಂಡವು ಗಾಬಾದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ನಿರೀಕ್ಷೆ ಇದೆ.
ಈ ಹಿಂದೆ ಟೆಸ್ಟ್ ಪಂದ್ಯಗಳಲ್ಲಿ ಆರಂಭಿಕನಾಗಿ ಬ್ಯಾಟಿಂಗ್ ಇಳಿಯುತ್ತಿದ್ದ ನಾಯಕ ರೋಹಿತ್ ಶರ್ಮಾ, ಮೊದಲ ಟೆಸ್ಟ್ನಲ್ಲಿ ಉತ್ತಮ ಆಟವಾಡಿದ ಕೆಎಲ್ ರಾಹುಲ್ ಅವರಿಗಾಗಿ ತಮ್ಮ ಸ್ಥಾನ ಬಿಟ್ಟುಕೊಡುವ ಅನಿವಾರ್ಯತೆಗೆ ಸಿಲುಕಿದ್ದರು.
ಅಲ್ಲದೆ, ಆರನೇ ಕ್ರಮಾಂಕದಲ್ಲಿ ಆಡಿ ಎರಡೂ ಇನ್ನಿಂಗ್ಸ್ಗಳಲ್ಲಿ ವೈಫಲ್ಯ ಅನುಭವಿಸಿದ್ದರು. ಕೆಎಲ್ ರಾಹುಲ್ ಕೂಡ ಪಿಂಕ್ ಬಾಲ್ ಪಂದ್ಯದಲ್ಲಿ ಪರದಾಡಿದ್ದರು. ಹೀಗಾಗಿ ಈ ಸಂಯೋಜನೆ ಎರಡನೇ ಪಂದ್ಯದಲ್ಲಿ ಕೆಲಸ ಮಾಡಿರಲಿಲ್ಲ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಯಾವುದಾದರೂ ಬದಲಾವಣೆಗಳು ನಡೆಯಲಿವೆಯೇ ಎಂಬ ಕುತೂಹಲ ಮೂಡಿಸಿದೆ.