ಗುಂಡ್ಲುಪೇಟೆ: ತಾಲ್ಲೂಕು ಮಡಿವಾಳ ಸಂಘದ ವತಿಯಿಂದ ಹೊರ ತಂದಿರುವ 2025ನೇ ಸಾಲಿನ ಕ್ಯಾಲೆಂಡರ್ ಅನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಡುಗಡೆ ಮಾಡಲಾಯಿತು.
ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ತಾಲೂಕು ಮಡಿವಾಳ ಸಂಘದ ಅಧ್ಯಕ್ಷರಾದ ಹಿರಿಕಾಟಿ ಸಿದ್ಧರಾಜು ನಮ್ಮ ಸಮಾಜದ ಪ್ರತಿಯೊಬ್ಬರೂ ಉನ್ನತ ಮಟ್ಟದಲ್ಲಿ ಬೆಳೆಯಬೇಕು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಸಮುದಾಯದ ಏಳಿಗೆಗೆ ಶ್ರಮಿಸಬೇಕು ಇದಕ್ಕಾಗಿಯೇ ತಾಲ್ಲೂಕು ಮಟ್ಟದಲ್ಲಿ ಸಂಘದ ಮರು ನಿರ್ಮಾಣ ಮಾಡಿ ನೂರಾರು ಸಂಖ್ಯೆಯಲ್ಲಿ ಸದಸ್ಯರನ್ನು ಒಗ್ಗೂಡಿಸಿ ಪ್ರತಿ ಹಳ್ಳಿ ಹಳ್ಳಿಗೂ ಭೇಟಿ ನೀಡಿ ಸಮುದಾಯದ ಶಕ್ತಿಯನ್ನು ಎಚ್ಚಿಸುವ ವಾತಾವರಣ ನಿರ್ಮಾಣ ಮಾಡಲು ಹೊರಟಿದ್ದೇವೆ ಎಂದು ತಿಳಿಸಿದರು.
ತಾಲ್ಲೂಕು ಯುವ ಘಟಕದ ಅಧ್ಯಕ್ಷರಾದ ಆನಂದ್ ಮಾತನಾಡಿದರು.ಈ ಸಂಧರ್ಭದಲ್ಲಿ ಉಪಾಧ್ಯಕ್ಷರಾದ ದಾಸಶಟ್ಟಿ, ಗೌರವಾಧ್ಯಕ್ಷರದ ಸಿದ್ದಶೆಟ್ಟಿ, ಪ್ರಧಾನ ಕಾರ್ಯದರ್ಶಿ ಬಂಗಾರಸ್ವಾಮಿ, ಸಹ ಕಾರ್ಯದರ್ಶಿ ಸುನಿಲ್, ಸಂಘಟನಾ ಕಾರ್ಯದರ್ಶಿ ರಮೇಶ್, ತೆರಕಣಾಂಬಿ ಹೋಬಳಿ ಅಧ್ಯಕ್ಷರಾದ ನಾಗರಾಜ್, ಮಾಜಿ ಅಧ್ಯಕ್ಷರಾದ ಸುಬ್ಬಶೆಟ್ಟಿ, ಹಿರಿಯ ಮುಖಂಡರಾದ ಶ್ರೀಕಂಠಶೆಟ್ಟಿ, ಪೊಲೀಸ್ ಮಹೇಶ್, ಸಿದ್ದು, ಶಿವು ಮತ್ತಿತರರು ಉಪಸ್ಥಿತರಿದ್ದರು.