ಯಲಹಂಕ: ದೇಶದಲ್ಲೇ ಮೊದಲಬಾರಿಗೆ ಅಂಗನವಾಡಿಯಲ್ಲಿ ಎಲ್ ಕೆ ಜಿ,ಯು ಕೆ ಜಿ ತರಗತಿಗಳನ್ನು ನಡೆಸುವ ಕ್ರಾಂತಿಕಾರಿ ಯೋಜನೆಗೆ ರಾಜ್ಯ ಸರ್ಕಾರ ಮುನ್ನುಡಿ ಬರೆದಿದ್ದು ನಿನ್ನೆ ಈ ಮಹತ್ವಕಾಂಕ್ಷೆ ಯೋಜನೆಗೆ ಚಾಲನೆ ನೀಡಲಾಗಿದೆ.
ಈ ಯೋಜನೆಯ ಅಂಗವಾಗಿ ದಾಸನಪುರ ಹೋಬಳಿ ಹುಸ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಹೊನ್ನಸಂದ್ರ ಕ್ರಾಸ್ನಲ್ಲಿ ಕನ್ನಡ ಹಾಗೂ ಆಂಗ್ಲ ಮಾಧ್ಯಮದ ಎಲ್ ಕೆ ಜಿ,ಯು ಕೆ ಜಿ ಪೂರ್ವ ಪ್ರಾಥಮಿಕ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಹುಸ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಾ.ಬಿ ರಮೇಶ್ ಖಾಸಗಿ ಶಾಲೆಗಳ ವ್ಯಾಮೋಹದಲ್ಲಿ ಸರ್ಕಾರಿ ಶಾಲೆಗಳನ್ನು ಕಡೆಗಣಿಸುತ್ತಿದ್ದ ಪೋಷಕರಿಗೆ ಇದು ಪಾಠವಾಗಲಿದೆ ಅಂಗನವಾಡಿಯಲ್ಲಿ ಎಲ್ಕೆಜಿ,
ಯುಕೆಜಿ ತರಗತಿಗಳನ್ನು ಆರಂಭಿಸಿರುವುದು ಶ್ಲಾಘನೀಯ ಸರ್ಕಾರದ ಈ ಕ್ರಮವನ್ನು ಸ್ವಾಗತಿಸುತ್ತೇನೆ ಗುಣಮಟ್ಟದ ವಿದ್ಯಾಭ್ಯಾಸಕ್ಕೆ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತಾ ಬಂದಿದ್ದು ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನವನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.*ಸೌಲಭ್ಯಗಳ ವಿತರಣೆ*. ಎಲ್ಕೆಜಿ ಯುಕೆಜಿ ಪೂರ್ವ ಪ್ರಾಥಮಿಕ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ಕಲಿಕಾ ಸಾಮಗ್ರಿ ಕಲಿಕಾ ಪುಸ್ತಕ ನೀಡಲಾಗಿದ್ದು ಹುಸ್ಕೂರು ಗ್ರಾಮ ಪಂಚಾಯಿತಿಯಿಂದ ಬೇಕಾದ ಅಗತ್ಯ ವಸ್ತುಗಳನ್ನು ನೀಡಲಾಗುವುದು ಎಂದು ಡಾ. ಬಿ ರಮೇಶ್ ತಿಳಿಸಿದರು.
ಈ ಸಂದರ್ಭದಲ್ಲಿ ಹುಸ್ಕೂರು ಗ್ರಾಮ ಪಂಚಾಯಿತಿ ಸದಸ್ಯರಾದ ಸಂಪತ್, ವಿಜಯ್ ಕುಮಾರ್, ಹೊನ್ನನಂಜಪ್ಪ, ನಾಗರಾಜು, ಅಂಗನವಾಡಿ ಕಾರ್ಯಕರ್ತರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.