ಬೆಳಗಾವಿ: ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ನಡುವಿನ ವಾಕ್ಸಮರದ ವಿಷಯಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಪೊಲೀಸ್ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.
ಇಂದು ಬೆಳಗಾವಿಗೆ ಭೇಟಿ ನೀಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಮಾರ್ಟಿನ್, ಎಸ್.ಪಿ ಭೀಮಶಂಕರ್ ಮಂಜುಣಾಥ್ ನಾಯ್ಕ್, ಶಂಕರ್ ಸೇರಿದಂತೆ ಅಧಿಕಾರಿಗಳೊಂದಿಗೆ ಸಮಾಲೋಚನೆ ಸಭೆ ನಡೆಸಿದ್ದಾರೆ.
ಈ ಸಂರ್ದದಲ್ಲಿ ಪೊಲೀಸ್ ಅಧಿಕಾರಿಗಳು ನೀಡಿದ ಮಾಹಿತಿಯಿಂದ ಪರಮೇಶ್ವರ್ ಅವರು ಅಸಮಾಧಾನ ಹೊರ ಹಾಕಿದ್ದಾರೆ.ಅವರ ನಡೆಯ ಬಗ್ಗೆಯೂ ಅತೃಪ್ತಿ ವ್ಯಕ್ತಪಡಿಸಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.