ಬೆಂಗಳೂರು: ಕನ್ನಡ ಜಾನಪದ ಪರಿಷತ್, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮಹಿಳಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಶ್ವೇತಾ. ಜಿ ಅವರಿಗೆ ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ ಜಾನಪದ ಎಸ್ ಬಾಲಾಜಿ ರವರು ಆಯ್ಕೆ ಪತ್ರವನ್ನು ನೀಡಿದರು.
ಈ ವೇಳೆ ಬೆಂಗಳೂರು ಕೇಂದ್ರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಹಾಯಕ ಪ್ರಾಧ್ಯಾಪಕರಾದ ಡಾ. ರತ್ನ ದಿವಾಕರ್, ಕಜಾಪ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ ಪ್ರೊ . .ಅಂಬಿಕಾ ಎ. ಆರ್ ಮತ್ತು ಕನ್ನಡ ಜಾನಪದ ಪರಿಷತ್ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಘಟಕದ ಅಧ್ಯಕ್ಷ ರ. ನರಸಿಂಹಮೂರ್ತಿ ಉಪಸ್ಥಿತರಿದ್ದರು.
ರಾಜ್ಯಾಧ್ಯಕ್ಷರಾದ ಡಾ. ಜಾನಪದ ಎಸ್ ಬಾಲಾಜಿ ಮಾತನಾಡಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಕನ್ನಡ ಜಾನಪದ ಪರಿಷತ್ತಿಗೆ ಹೆಚ್ಚಿನ ವಿದ್ಯಾರ್ಥಿಗಳು,
ಶಿಕ್ಷಕರು ಹಾಗೂ ಮಹಿಳೆಯರನ್ನು ಹೆಚ್ಚಾಗಿ ಸಂಘಟಿಸಿ ಕನ್ನಡ ಜಾನಪದ ಪರಿಷತ್ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಿ ನಶಿಸುತ್ತಿರುವ ಜಾನಪದವನ್ನು ಉಳಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಮುಂದೆ ನಡೆಯುವ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕನ್ನಡ ಜಾನಪದ ಸಮ್ಮೇಳನ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಮಾಡಲು ಈಗಿನಿಂದಲೇ ತಯಾರಿ ನಡೆಸಬೇಕೆಂದು ತಿಳಿಸಿದರು.