ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಘಟಕದ ಅಧ್ಯಕ್ಷರನ್ನಾಗಿ ಗೋವಿಂದರಾಜನಗರ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸಲು ಶ್ರಮಿಸುತ್ತಿರುವ ರ. ನರಸಿಂಹಮೂರ್ತಿ ರವರನ್ನು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಎಸ್ ಬಾಲಾಜಿಯವರು ಆಯ್ಕೆಯ ಆದೇಶ ಪತ್ರ ನೀಡಿ ಸನ್ಮಾನಿಸಿ ಗೌರವಿಸಿದರು.
ಈ ವೇಳೆ ನೇಮಕಾತಿ ಆದೇಶ ಪತ್ರ ಸ್ವೀಕರಿಸಿ ರ. ನರಸಿಂಹಮೂರ್ತಿ ಮಾತನಾಡಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕನ್ನಡ ಜಾನಪದ ಮನಸುಗಳ ಒಗ್ಗೂಡುವಿಕೆ, ಜಾನಪದ ಕಲೆಗಳ ಮತ್ತು ನಾಡು ನುಡಿಯೊಂದಿಗೆ ಜಾನಪದ ಕಲಾವಿದರನ್ನು ಬೆಳೆಸುವ ಮತ್ತು ಉಳಿಸುವ ನಿಟ್ಟಿನಲ್ಲಿ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ಸಲುವಾಗಿ ಶ್ರಮಿಸಿ ಕನ್ನಡ ಜಾನಪದ ಪರಿಷತ್ತಿಗೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿನ ಜನರನ್ನು ಸಂಘಟಿಸಲು ಹಗಲಿರುಳು ಶ್ರಮಿಸುವೆ.
ಅಗಸ್ಟ್ 18ರ ಭಾನುವಾರ ಬೆಳಿಗ್ಗೆ 10.30ಗಂಟೆಗೆ ಡಾ. ರಾಜಕುಮಾರ್ ವಾರ್ಡಿನ ಅಗ್ರಹಾರ ದಾಸರಹಳ್ಳಿಯ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದ ಸಭಾಂಗಣದಲ್ಲಿ ಪದಗ್ರಹಣ ಕಾರ್ಯಕ್ರಮ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕನ್ನಡ ಜಾನಪದ ಪರಿಷತ್ತಿನ ಪದಾಧಿಕಾರಿಗಳಿಗೆ ಆಯ್ಕೆ ಪತ್ರ ನೀಡುವ ಮತ್ತು ಉದ್ಘಾಟನಾ ಕಾರ್ಯಕ್ರಮ ರಾಜ್ಯಾಧ್ಯಕ್ಷರಾದ ಡಾ. ಎಸ್ ಬಾಲಾಜಿಯವರ ನೇತೃತ್ವದಲ್ಲಿ ಜರುಗಲಿದೆ ಎಂದು ರ. ನರಸಿಂಹಮೂರ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ವೇಳೆ ಕನ್ನಡ ಜಾನಪದ ಪರಿಷತ್ತಿನ ಬೆಂಗಳೂರು ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾದ ಅಜಿತ್ ಕುಮಾರ್ ಮತ್ತಿತರರು ಹಾಜರಿದ್ದರು.