ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಯೋಜನೆಗಳ ಬಗ್ಗೆ ಸಚಿವರು ನೀಡುತ್ತಿರುವ ಹೇಳಿಕೆಗಳು ಫಲಾನುಭವಿಗಳಲ್ಲಿ ಗೊಂದಲ ಸೃಷ್ಟಿಸಿದೆ.
ಇತ್ತೀಚೆಗೆ ಸಚಿವ ಜಾರಕಿಹೊಳಿ ನೀಡಿದ ಹೇಳಿಕೆ ಬೆನ್ನಲ್ಲೇ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರು ದೆಹಲಿಯಲ್ಲಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಮಾತನಾಡಿದ್ದರು.
ಇದಕ್ಕೆ ಪ್ರತಿಯಾಗಿ ಇಂದು ದೆಹಲಿಯಲ್ಲ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಅದರಂತೆ ಸರ್ಕಾರದ ಬಜೆಟ್ನಲ್ಲಿ ಇಲಾಖಾವಾರು ಅನುದಾನ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಯೋಜನೆಗಳಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಹೇಳಿದಾರೆ.ಮತ್ತೊಂದು ಕಡೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಯವರು ಅಸೂಯೆಯಿಂದ ಮಾತನಾಡುತ್ತಿದ್ದಾರೆ.ಯೋಜನೆಗಳಲ್ಲಿ ಆಗುತ್ತಿರುವ ದುರುಪಯೋಗವನ್ನು ತಡೆಯಬೇಕಾಗಿದೆ. ಯೋಜನೆಗಳ ಬದಲಾವಣೆ ಮಾಡುವುದು ಬಿಡುವುದು ಸರ್ಕಾರ ನಿರ್ಧಾರ ಮಾಡುತ್ತೆ.
ಯೋಜನೆ ನಿಲ್ಲಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದಿದ್ದಾರೆ.ಒಟ್ಟಾರೆ ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ಕಾರದ ನಿಲುವಿನ ಬಗ್ಗೆ ಜನತೆಯಲ್ಲಿ ಗೊಂದಲವಂತೂ ಮೂಡಿಸಿದಂತಾಗಿದೆ.