ಚನ್ನಪಟ್ಟಣ: ಬಹಿರಂಗ ಪ್ರಚಾರ ಅಂತ್ಯಗೊಡ ನಂತರ ಮನೆ ಮನೆಗೆ ತೆರಳಿ ಪ್ರಚಾರ ಮಾಡಬಹುದು. ಮಾದರಿ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ೧೬ ಎಸ್ಎಸ್ಟಿ ತಂಡ ಮತ್ತು ೯ ಎಫ್ಎಸ್ಟಿ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.ಗುರುಕಾರ್ ತಿಳಿಸಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೨೭೬ ಮತಗಟ್ಟೆಗಳನ್ನು ರಚಿಸಲಾಗಿದ್ದು, ಎಲ್ಲಾ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ಗೆ ಪ್ರಕ್ರಿಯೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ, ೧೧೯ ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ. ಅವರು ಚುನಾವಣಾ ವೀಕ್ಷಕರ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಾರೆ ಎಂದು ಹೇಳಿದರು.
ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವ್ಯಕ್ತಿಯೊಬ್ಬರು ಗರಿಷ್ಠ ೫೦,೦೦೦ ರೂ.ಗಳ ನಗದನ್ನು ಸಾಗಿಸಬಹುದಾಗಿದೆ. ಅದಕ್ಕೂ ಹೆಚ್ಚಿನ ಮೊತ್ತ ಕೊಂಡೊಯ್ಯಬೇಕಾದರೆ ಅಗತ್ಯ ದಾಖಲಾತಿಗಳನ್ನು ಹೊಂದಿರಬೇಕು ಎಂದು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರು ಮಾತನಾಡಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ೮ ಪ್ಯಾರಾ ಮಿಲಿಟರಿ ತಂಡ ಜಿಲ್ಲೆಗೆ ಆಗಮಿಸಿದೆ, ಅದರಲ್ಲಿ ೭ ಪ್ಯಾರಾ ಮಿಲಿಟರಿ ಪಡೆಯನ್ನು ೧೯೭ ಮತಗಟ್ಟೆಗಳ ಬಂದೋಬಸ್ತೆ÷್ಗ ನಿಯೋಜಿಸಲಾಗಿದೆ, ೧೧೯ ಕ್ರಿಟಿಕಲ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಒಬ್ಬರು ಪೊಲೀಸ್ ಹಾಗೂ ಒಬ್ಬರು ಗೃಹ ರಕ್ಷಕರು (ಹೋಮ್ ಗಾರ್ಡ್) ಇರುತ್ತಾರೆ. ಸಾಮಾನ್ಯ ಮತಗಟ್ಟೆಗಳಿಗೆ ಪೊಲೀಸ್ ಸಿಬ್ಬಂದಿ ಹಾಗೂ ೫೪ ಕ್ಲಸ್ಟರ್ ಮತಗಟ್ಟೆಗಳಿಗೆ ಎಎಸ್ಐ ರ್ಯಾಂಕ್ ಅಧಿಕಾರಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಇದೂವರೆಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಒಟ್ಟು ೧೪ ಪ್ರಕರಣಗಳನ್ನು ದಾಖಲಿಸಲಾಗಿದ್ದು, ೧೪ ಪ್ರಕರಣಗಳನ್ನು ಎಫ್ಐಆರ್ ಮಾಡಲಾಗಿದೆ. ಅವುಗಳಲ್ಲಿ ಪೊಲೀಸ್ ಇಲಾಖೆ ವ್ಯಾಪ್ತಿಗೆ ಒಳಪಡುವ ೯ ಅಬಕಾರಿ ಪ್ರಕರಣಗಳು ಸೇರಿವೆ, ೬೭೬ ಸೀರೆ/ವಸ್ತçಗಳನ್ನು ಜಫ್ತಿ ಮಾಡಲಾಗಿದೆ, ಈ ಪ್ರಕರಣಕ್ಕೆ ಸಂಬAಧಿಸಿದAತೆ ಮ್ಯಾನೇಜರ್ ಹಾಗೂ ಮತ್ತೊಬ್ಬರ ಮೇಲೆ ಎಫ್ಐಆರ್ ದಾಖಲಾಗಿದೆ ಎಂದರು.
ಹಣ ಇತರೆ ಆಮಿಷಗಳನ್ನೊಡುತ್ತಿದ್ದರೆ ದೂರು ದಾಖಲಿಸಲು ೧೯೫೦ಗೆ ಕರೆ ಮಾಡಬಹುದು ಅಥವಾ ಸಿ-ವಿಷಲ್ ಆಪ್ ಮೂಲಕ ದೂರು ನೀಡಬಹುದಾಗಿದೆ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ೨೦೨೩ರ ಕಲಂ ೧೬೩ರಂತೆ ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ೨೦೨೪ರ ನ.೧೨ರ ಮಂಗಳವಾರ ಸಂಜೆ ೬ ಗಂಟೆಯAAದ ನ.೧೪ರ ಗುರುವಾರ ಬೆಳಿಗ್ಗೆ ೬ ಗಂಟೆಯ ವರೆಗೆ ವಿವಿಧ ಷರತ್ತುಗಳನ್ನು ವಿಧಿಸಿ, ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ
ಚುನಾವಣಾ ಮತದಾನಕ್ಕೆ ಪಿಆರ್ಒ, ಎಪಿಆರ್ಓ ಹಾಗೂ ಪಿಒಎಸ್ ಸೇರಿದಂತೆ ೧,೨೫೨ ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇವರಿಗೆ ಅಕ್ಟೋಬರ್ ೨೬ ಹಾಗೂ ನವೆಂಬರ್ ೫ ರಂದು ತರಬೇತಿಯನ್ನು ಸಹ ನೀಡಲಾಗಿದೆ ಹಾಗೂ ೧೧೯ ಮೈಕ್ರೋ ವೀಕ್ಷಕರಿಗೆ ನವೆಂಬರ್ ೫ ಹಾಗೂ ೮ ರಂದು ತರಬೇತಿ ನೀಡಲಾಗಿದೆ ಎಂದರು.