ಮೈಸೂರು: ಬಿಜೆಪಿ ಭಿನ್ನಮತೀಯ ಗುಂಪಿನ ನಾಯಕನೆಂದೇ ಹೊರ ಹೊಮ್ಮಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಯತ್ನಾಳ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರ ಅವರ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.
ಈ ಸಂದರ್ಭದಲ್ಲಿ ಯತ್ನಾಳ್ ಕಸಿವಿಸಿಗೊಂಡಿದ್ದು, ಯಾವುದನ್ನೂ ಲೆಕ್ಕಿಸದೇ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಪೂಜೆ ಸಂದರ್ಭದಲ್ಲಿ ಹರಕೆ ತೀರಿಸುತ್ತಿದ್ದೇನೆ ಎಂದು ಹೇಳಿ ದೇವಸ್ಥಾನದ ಹುಂಡಿಗೆ 1 ಲಕ್ಷ ರೂಪಾಯಿ ಕಾಣಿಕೆ ಹಾಕಿದ್ದಾರೆ.ಇದೇ ಸಂದರ್ಭದಲ್ಲಿ ಪತ್ರದ ಕಡತವೊಂದನ್ನು ದೇವಿ ಸನ್ನಿಧಿಯಲ್ಲಿಟ್ಟು ಪೂಜೆ ಸಲ್ಲಿಸಿದ್ದಾರೆ.