ಚಿತ್ರದುರ್ಗ: ಚಿತ್ರದುರ್ಗ-ಚಳ್ಳಕೆರೆ-ಪಾವಗಡ ಮಧ್ಯದ 120 ಕಿ.ಮೀ.ಉದ್ದದ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಯಾಗಿ ಮೇಲ್ದರ್ಜೆಗೆ ಏರಿಸಲು ಕೇಂದ್ರಕ್ಕೆ ಪ್ರಸ್ತಾವನೆ (National highways of India)ಸಲ್ಲಿಸಲಾಗುವು ದು. ಈ ರಸ್ತೆ ಅಭಿವೃದ್ದಿಯಿಂದ ಆಂದ್ರಪ್ರದೇಶ ಹಾಗೂ ಕರ್ನಾಟಕದ ನಡುವೆ ಸಂಪರ್ಕ ವೃದ್ಧಿಸಲಿದೆ. ಕೇಂದ್ರ ಸರ್ಕಾರದಿಂದ ಈ ಯೋಜನೆಗೆ ಅನುಮೋದನೆ ಪಡೆ ಯಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟೀ ಯ ಹೆದ್ದಾರಿ ವಿಭಾಗ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿ ವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಭೆನಡೆಸಿ,ಮಾತನಾ ಡಿದರು.ಚಳ್ಳಕೆರೆ ತಾಲ್ಲೂಕಿನ 8000 ಎಕೆರೆ ಪ್ರದೇಶದಲ್ಲಿ ಐ.ಎಸ್.ಎಸ್.ಸಿ,ಇಸ್ರೋ ಡಿ.ಆರ್.ಡಿ.ಓ ಸಂಸ್ಥೆಗಳ ಸ್ಥಾ ಪನೆಯಿಂದ ಚಳ್ಳಕೆರೆ ದೇಶದ ಪ್ರಮುಖ ನಗರವಾಗಿ ಮುನ್ನೆಲೆಗೆ ಬಂದಿದೆ. ಚಳ್ಳಕೆರೆ ನಗರ ವ್ಯಾಪ್ತಿಯ ರಸ್ತೆ ಗಳು ಸರಿಯಿಲ್ಲ.
ಈ ರಸ್ತೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರವು (National highways of India)ಅಭಿ ವೃದ್ಧಿ ಪಡಿ ಸುತ್ತಿಲ್ಲ. ಆದ್ದರಿಂದ ಚಳ್ಳಕೆರೆ ನಗರ ಪ್ರದೇಶ ದ 5.7 ಕಿ.ಮೀ. ರಸ್ತೆಯನ್ನು ರೂ.50 ಕೋಟಿ ವೆಚ್ಚದಲ್ಲಿ ಒಂದು ಬಾರಿಗೆ ಅಭಿವೃದ್ಧಿ ಪಡೆಸಲು,ಭಾರತ ಸರ್ಕಾರಕ್ಕೆ ಪ್ರಸ್ತಾ ವನೆ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳಲಾಗುವುದು, ಎಂದು ಸಂಸದ ಗೋವಿಂದ ಎಂ ಕಾರಜೋಳ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇ ಶ್ ಸೇರಿದಂತೆ ಇತರೆ ರಸ್ತೆ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.