ಚಿತ್ರದುರ್ಗ/ಹಿರೇಗುಂಟನೂರು: ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಕಡಿಮೆಗೊಳಿಸಲು ಹಾಗೂ ಜಂತುಹುಳುಗಳ ಬಾಧೆಯಿಂದ ಮಕ್ಕಳನ್ನು ರಕ್ಷಿಸಲು ಮಕ್ಕಳಿಗೆ ಆಲ್ ಬೆಂಡಾಜೋಲ್ ಎಂಬ ಜಂತುಹುಳು ನಿವಾರಣಾ ಮಾತ್ರೆ ನೀಡುವ ಮೂಲಕ ಪ್ರತಿ ವರ್ಷ ಡಿಸೆಂಬರ್ 9 ರಂದು ರಾಷ್ಟ್ರೀಯ ಜಂತು ಹುಳು ನಿರ್ಮೂಲನಾ ದಿನಾಚರಣೆಯ ಆಚರಿಸಲಾಗುತ್ತದೆ ಒಂದರಿಂದ 19 ವರ್ಷದ ಒಳಗಿನ ಎಲ್ಲಾ ಮಕ್ಕಳು ಪದೇ ಪದೇ ಹೊಟ್ಟೆ ನೋವು ಅನುಭವಿಸಿದ್ದನ್ನು ತಪ್ಪಿಸಲು ತಪ್ಪದೇ ಈ ಜಂತುಹುಳು ನಿವಾರಣ ಮಾತ್ರೆಯನ್ನು ಸೇವಿಸಬೇಕು ಇದು ಮಕ್ಕಳಿಗೆ ಆರೋಗ್ಯ ಕವಚ ಇದ್ದಂತೆ ಎಂದು ಹಿರೇಗುಂಟನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ|| ಅಭಿಷೇಕ್ ಹಿರೇಮಠ್ ತಿಳಿಸಿದರು.
ಅವರು ಸೋಮವಾರ ರಾಷ್ಟ್ರೀಯ ಜಂತುಹುಳ ನಿವಾರಣ ದಿನದ ಅಂಗವಾಗಿ ಚಿತ್ರದುರ್ಗ ತಾಲೂಕು ಹಿರೇಗುಂಟನೂರು ಗ್ರಾಮದ ಶ್ರೀ ದ್ಯಾಮಲಂಬಿಕ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಜಂತುಹುಳ ನಿವಾರಣ ಮಾತ್ರೆಯಾದ ಆಲ್ ಬೆಂಡಾಜೋಲ್ ನೀಡಿ ಮಾತ
ನಾಡುತ್ತಾ ಮಕ್ಕಳ ಆರೋಗ್ಯದ ಮೇಲೆ ಯಾವುದೇ ರೀತಿಯಅಡ್ಡ ಪರಿಣಾಮಗಳು ಬೀರದ ರೀತಿಯಲ್ಲಿ ಮಾತ್ರೆಯನ್ನು ತಯಾರಿಸಲಾಗಿದ್ದು, ಮಕ್ಕಳು ನಿಶ್ಚಿಂತೆಯಿಂದ ಯಾವುದೇ ಭಯ ಅಥವಾ ಹಿಂಜರಿಕೆ ಪಡದೆ 6 ತಿಂಗಳಿಗೊಮ್ಮೆ ತೆಗೆದುಕೊಳ್ಳಬೇಕು.
ಇದರಿಂದ ಮಕ್ಕಳಲ್ಲಿ ಕಂಡುಬರುವ ಹೊಟ್ಟೆನೋವು, ಆಯಾಸಹಾಗೂ ಇನ್ನಿತರ ಸಮಸ್ಯೆಗಳು ಕಡಿಮೆಯಾಗಿ ಅನಿಮಿಯವನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ. ಹಾಗಾಗಿ ಸದೃಢ ಅರೋಗ್ಯವಂತ ಭಾರತವನ್ನು ನಿರ್ಮಿಸಲು ಇಂದಿನಿಂದಲೇ ಮಕ್ಕಳು ಹೆಚ್ಚೆಚ್ಚು ಅರೋಗ್ಯ ಅಧಿಕಾರಿಗಳು ಶಿಕ್ಷಕರು ನೀಡುವ ಸಲಹೆಯನ್ನು ಪಾಲಿಸಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಹಾಜರಿದ್ದ ಹಿರೇಗುಂಟನೂರು ಆರೋಗ್ಯ ನಿರೀಕ್ಷಣಾಧಿಕಾರಿ ಪುಟ್ಟುಸ್ವಾಮಿ ಮಾತನಾಡಿ “ ಮಕ್ಕಳೆಲ್ಲ ಇಂದು ಜಂತುಹುಳು ನಿವಾರಣಾ ಮಾತ್ರೆ ಆಲೈಂಡಜೋಲ್ನ್ನು ಶಿಕ್ಷಕರಿಂದ ಪಡೆದು, ಜಗಿದು ನುಂಗಬೇಕು. 1 ವರ್ಷದಿಂದ 2 ವರ್ಷದೊಳಗಿನ ಮಕ್ಕಳಿಗೆ ಅರ್ಧ ಮಾತ್ರೆ(ಪುಡಿ ಮಾಡಿ) ಮತ್ತು 2 ರಿಂದ 19 ವರ್ಷದೊಳಗಿನ ಮಕ್ಕಳಿಗೆ 1 ಮಾತ್ರೆಯನ್ನು ಜಗಿದು ನುಂಗಲು ಶಿಕ್ಷಕರು ನೀಡಬೇಕು. ಈ ಹಿಂದೆ ಜಂತು ಹುಳು ಮಾತ್ರೆಯನ್ನು ತೆಗೆದುಕೊಂಡಿದ್ದರೂ ಸಹ ಪಲ್ಸ್ ಪೋಲಿಯೋ ಮಾದರಿಯಲ್ಲಿ ಇಂದು ಎಲ್ಲ ಮಕ್ಕಳು ಮಾತ್ರೆಯನ್ನು ತಗೆದುಕೊಳ್ಳಬೇಕು. ಮಾತ್ರೆಯನ್ನು ಜಗಿದು ನುಂಗಬೇಕು.
ಜಂತು ಹುಳು ಸೋಂಕಿನಿಂದ ಮಕ್ಕಳಲ್ಲಿ ರಕ್ತಹೀನತೆ, ಪೌಷ್ಟಿಕಾಂಶ ಕೊರತೆ, ಹಸಿವಾಗದಿರುವುದು, ವಾಂತಿ, ನಿಶಕ್ತಿ, ಅತಿಸಾರ, ಓದಿನಲ್ಲಿ ಏಕಾಗ್ರತೆ ಕೊರತೆ ಮುಂತಾದ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಆದ್ದರಿಂದ ಮಕ್ಕಳು ಆರು ತಿಂಗಳಿಗೊಮ್ಮೆ ಜಂತು ಹುಳು ಮಾತ್ರೆ ತೆಗೆದುಕೊಳ್ಳಬೇಕು. ಜೊತೆಗೆ ಸೋಂಕು ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಆಹಾರ ತೆಗೆದುಕೊಳ್ಳುವ ಮುನ್ನ ಸೋಪಚ್ಚಿ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಎಂದು ಮಕ್ಕಳಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಯೋಗ ತರಬೇತಿದಾರ ರವಿ ಕೆ. ಅಂಬೇಕರ್ “ಚಳಿಗಾಲದಲ್ಲಿ ಮಕ್ಕಳಲ್ಲಿ ಮೂಗು ಸೋರುವುದು, ಜ್ವರ ಮತ್ತು ಕೆಮ್ಮು ಎಂದಿಗೂ ಮುಗಿಯದೆ ಚಕ್ರದಂತೆ ಕಾಣುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಬೆಳೆಸುವುದು ಬಹಳ ಮುಖ್ಯವಾಗಿರುತ್ತದೆ. ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು.
ಆರೋಗ್ಯಕರ ಆಹಾರ ಪದ್ಧತಿಗಳನ್ನು ಪಾಲಿಸುವುದು, ಸ್ವಲ್ಪಮಟ್ಟಿಗಿನ ವ್ಯಾಯಾಮ ಮಾಡುವುದು ಮತ್ತು ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳುವಂತಹ ಸರಳ ಕ್ರಮಗಳು ತಪ್ಪದೇ ಪಾಲಿಸಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ 250ಕ್ಕೂ ಅಚ್ಚು ಮಕ್ಕಳಿಗೆ ಜಂತುಹುಳ ನಿವಾರಣ ಮಾತ್ರೆಯನ್ನು ನೀಡಲಾಯಿತು ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಮೀನಾಜ್ ಎಂ., ಸಹ ಶಿಕ್ಷಕರಾದ ಸುರಯ್ಯಜಬೀನ್, ರಾಧಮ್ಮ ವೃಕ್ಸಾನಬಾನು ಆಸ್ಥಿಯಾ ಕೌಸರ್, ಸುಜಾತಾ ಮಾಮಾಜಾನ್ ಶಶಿಕುಮಾರ್ ನವೀನ್ ಕುಮಾರ್ ತೇಜಸ್ವಿ ಸಿಆರ್, ಸುಜಾತಾ ಟಿ, ಆಫ್ರಿನ್ ಮೈತಾಜ್ ಹಾಗೂ ಶಾಲೆಯ ಇನ್ನಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು