ಗುಂಡ್ಲುಪೇಟೆ: ತಾಲ್ಲೂಕು ಅಡಳಿತ ಅಯೋಜಿಸಿದ್ದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ರವರ ಪರಿನಿಬ್ಬಾಣ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಶಾಸಕರಾದ ಗಣೇಶ್ ಪ್ರಸಾದ್ ರವರು ತಡವಾಗಿ ಆಗಮಿಸದರೆಂದು ದಲಿತ ಮುಖಂಡ ಚಿಕ್ಕಣ್ಣನವರು ಆರೋಪಿಸುತ್ತುರುವುದು ಸತ್ಯಕ್ಕೆ ದೂರವಾದ ಸಂಗತಿ ಯಾಗಿದೆ ಎಂದು ತಾಲ್ಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಸೋಮ ಹಳ್ಳಿ ರವಿರವರು ತಿಳಿಸಿದರು.
ಇಂದು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಶಾಸಕರಿಗೆ ಬಾಬಾ ಸಾಹೇಬ್ ಮೇಲೆ ಅಪಾರ ಗೌರವ ವಿದ್ದು ಸಂವಿಧಾನ ಮೇಲೆ ನಂಬಿಕೆ ಇಟ್ಟಿದ್ದಾರೆ ಅದರೆ ವಿರೋಧ ಪಕ್ಷದವರು ಶಾಸಕರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಹೊರಿಸಿ ದಲಿತ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ.
ಈ ಆರೋಪ ರಾಜಕೀಯ ಪ್ರೇರಿತವಾಗಿದ್ದು ಬರುವ ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ತಪ್ಪು ಸಂದೇಶ ರವಾನೆಯಗುವ ಉದ್ದೇಶದಿಂದ ಈ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅದರೆ, ನಮ್ಮ ಶಾಸಕರು ದಿನಾ ದಲಿತ ಮೇಲೆ ಅಪಾರ ಕಾಳಜಿ ಉಳ್ಳವರಾಗಿದ್ದಾರೆ ಎಂದು ತಿಳಿಸಿದರು.
ನಂತರ ಬೆಗೋರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ದಾಸ್ ಮಾತನಾಡಿ ಕ್ಷೇತ್ರದಲ್ಲಿ ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್ ರವರ ಎಳಿಗೆ ಸಹಿಸಲಾರದೆ, ಶಾಸಕರ ಹೆಸರಿಗೆ ಮಸಿ ಬಳಿಯಲು ಕ್ಷೇತ್ರದ ಬಿಜೆಪಿ ಪಕ್ಷದ ಮುಖಂಡರು, ಬಿಜೆಪಿ ಬೆಂಬಲಿತ ಕೆಲ ದಲಿತ ನಾಯಕರನ್ನು ಮುಂದಿಟ್ಟುಕೊಂಡು ಪತ್ರಿಕಾಗೋಷ್ಠಿಯಲ್ಲಿ ಶಾಸಕರ ವಿರುದ್ಧ ಅರೋಪ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.ಈ ವೇಳೆ ಪುರಸಭೆ ಮಾಜಿ ಸದಸ್ಯ ಮೋಹನ್ ಕುಮಾರ್ .ಸಮಾಜಿಕ ಜಾಲತಾಣ ಕಾರ್ಯದರ್ಶಿ ಚಿರಕನಹಳ್ಳಿ ಶ್ರೀನಿವಾಸ್. ಕಾಂಗ್ರೆಸ್ ಮುಖಂಡ ಅಣ್ಣೂರು ಸ್ವಾಮಿ ಹಾಜರಿದ್ದರು.