ಬೆಂಗಳೂರು: ಗೋವಿಂದ ರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಮಂಡಲಬಿಜೆಪಿ ವತಿಯಿಂದ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣರವರ ಹುಟ್ಟುಹಬ್ಬದ ಅಚರಣೆ ಮತ್ತು ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಮತ್ತು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು,ಹಂಪಲು ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೇಂದ್ರ ಸಚಿವರಾದ ವಿ.ಸೋಮಣ್ಣರವರು ಅದಿಚುಂಚಗಿರಿ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಶ್ರೀ ಸೌಮ್ಯನಾಥ ಸ್ವಾಮೀಜಿರವರಿಂದ ಆಶೀರ್ವಾದ ಪಡೆದರು.ಶಾಸಕರಾದ ಸಿ.ಕೆ. ರಾಮಮೂರ್ತಿ, ರಾಜ್ಯ ಬಿಜೆಪಿ ಯುವ ಮುಖಂಡ ಡಾ||ಅರುಣ್ ಸೋಮಣ್ಣ, ಆಡಳಿತ ಪಕ್ಷದ ಮಾಜಿ ನಾಯಕ ರವೀಂದ್ರ, ಮಂಡಲ ಅಧ್ಯಕ್ಷ ವಿಶ್ವನಾಥಗೌಡ, ಮಾಜಿ ಪಾಲಿಕೆ ಸದಸ್ಯರುಗಳಾದ ಮೋಹನ್ ಕುಮಾರ್, ಬಾಬಿ ವೆಂಕಟೇಶ್, ದಾಸೇಗೌಡ, ಕ್ರಾಂತಿರಾಜುರವರು ಉಪಸ್ಥಿತರಿದ್ದರು.
ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರದಲ್ಲಿ ನೂರಾರು ಜನರಿಗೆ ತಜ್ಞ ವೈದ್ಯರಿಂದ ತಪಾಸಣೆ ಮಾಡಲಾಯಿತು.ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರಾದ ವಿ.ಸೋಮಣ್ಣರವರು ಮಾತನಾಡಿ ನನ್ನ ಜೀವನದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಮತ್ತು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿರವರ ಆಶೀರ್ವಾದ, ಒಡನಾಟದಿಂದ ಕಳೆದ 45ವರ್ಷಗಳಿಂದ ಜನಸೇವೆ ಮಾಡಲು ಸಾಧ್ಯವಾಗಿದೆ.
ಬಿನ್ನಿಪೇಟೆ, ವಿಜಯನಗರ, ಗೋವಿಂದರಾಜನಗರ ಮತ್ತು ತುಮಕೂರು ಕ್ಷೇತ್ರಗಳು ನನ್ನ ಹೃದಯದಲ್ಲಿ ಇದೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಅವಧಿಯಲ್ಲಿ ಚುನಾವಣೆ ಪ್ರಚಾರ ಮಾಡಲು ಅವಕಾಶ ಸಿಕ್ಕಿತ್ತು ಅಲ್ಲಿನ ಜನರ ಪ್ರೀತಿ ವಿಶ್ವಾಸದಿಂದ ನನಗೆ 1ಲಕ್ಷದ 75ಸಾವಿರ ಅಂತರದಿಂದ ಜಯಗಳಿಸಿದೆ. ಬೆಂಗಳೂರುನಗರ ಹತ್ತಿರದಲ್ಲಿ ತುಮಕೂರು ಕ್ಷೇತ್ರವು ಇದೆ ಮಾದರಿ ಹೈಟೆಕ್ ಕ್ಷೇತ್ರವಾಗಿ ಮಾಡಲಾಗುತ್ತದೆ.
ತುಮಕೂರು ಪುಣ್ಯ ಭೂಮಿ ಕ್ಷೇತ್ರವಾಗಿದೆ. ರಾಜ್ಯದಲ್ಲಿ ರೈಲ್ವೆ ಯೋಜನೆಗಳು ಶೀಘ್ರಗತಿಯಲ್ಲಿ ಕಾಮಗಾರಿ ಪೂರ್ಣ ಮತ್ತು ಜಲಶಕ್ತಿ ಯೋಜನೆಗಳಿಗೆ ಹೊಸ ಕಾಯಕಲ್ಪ ನೀಡಲಾಗುವುದು. ಪ್ರಧಾನಿ ನರೇಂದ್ರಮೋದಿರವರ ನೇತೃತ್ವದಲ್ಲಿ 10ವರ್ಷದಲ್ಲಿ ವಿಶ್ವದ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ. ವಿ.ಸೋಮಣ್ಣ ಎಂದರೆ ಸಾಮಾನ್ಯ ಕಾರ್ಯಕರ್ತ ನನ್ನನು ಗುರುತಿಸಿ ಬೆಳಸಿದ ನಾಡಿನ ಜನರು ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ಧ್ಯನವಾದಗಳು ಎಂದು ಹೇಳಿದರು.ಬಿಜೆಪಿ ಮುಖಂಡರುಗಳಾದ ವೇಣುಗೌಡ, ಸಿ.ಎಂ.ರಾಜಪ್ಪ, ಶ್ರೀಧರ್, ಡೊಡ್ಡವೀರಯ್ಯ, ರಮೇಶ್ ಮಹಿಳಾ ಅಧ್ಯಕ್ಷೆ ರತ್ಮಮ್ಮ ಮತ್ತಿತರರು ಹಾಜರಿದ್ದರು.