ಹಾಸನ: ಜಾನುವಾರು ಹುಡುಕಲು ಹೋದ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ಬೇಲೂರು ತಾಲೂಕಿನ ಬೆಳ್ಳಾವರ ಗ್ರಾಮದ ಬಳಿ ನಡೆದಿದೆ.ಕನಗುಪ್ಪೆಯ ದ್ಯಾವಮ್ಮ(60) ಎಂಬುವರೇ ಶವವಾಗಿ ಪತ್ತೆಯಾಗಿರುವ ಮಹಿಳೆಯಾಗಿದ್ದಾರೆ.
ಕಾಡಾನೆ ದಾಳಿಗೆ ಸಿಕ್ಕಿ ಈ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದಾವಿಸಿ ಪರಿಶೀಲನೆ ನಡೆಸಿದ್ದಾರೆ.ಅರೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.