ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ ನಿನ್ನೆ ನಡೆದಿದೆ. ರಾಮಚಂದ್ರು (21) ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕ. ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ರಾಮಚಂದ್ರು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಒಂದು ವರ್ಷದ ಹಿಂದೆ ಅಪ್ರಾಪ್ತೆ ಕರೆದೊಯ್ದ ಹಿನ್ನೆಲೆಯಲ್ಲಿ ರಾಮಚಂದ್ರು ವಿರುದ್ಧ ಫೋಕ್ಸೋ ಕೇಸ್ ದಾಖಲಾಗಿತ್ತು. ಫೋಕ್ಸೋ ಕೇಸ್ನಲ್ಲಿ 6 ತಿಂಗಳು ಜೈಲುವಾಸ ಅನುಭವಿಸಿದ್ದ. ಬಳಿಕ 2 ಕುಟುಂಬಗಳ ರಾಜಿ ಸಂಧಾನ ಬಳಿಕ ಕೇಸ್ ವಾಪಾಸ್ ಪಡೆಯಲಾಗಿತ್ತು. ನಂತರ ಅಪ್ರಾಪ್ತ ಪ್ರಿಯತಮೆ ರಾಮಚಂದ್ರನ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಹೀಗಾಗಿ ಮನನೊಂದ ರಾಮಚಂದ್ರ ನಿನ್ನೆ ಆಕೆಯ ಮುನೆಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಲ್ಲುಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಪೋಟಿಸಿಕೊಂಡು ಸೂಸೈಡ್ ಮಾಡಿಕೊಂಡಿದ್ದು, ಸ್ಪೋಟಕದ ಬಗ್ಗೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ.
ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಸ್ಥಳಕ್ಕೆ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ ದೌಡಾಯಿಸಿ ಸ್ಫೋಟಕ್ಕೆ ಬಳಸಿರುವ ವಸ್ತು ಹಾಗೂ ತೀವ್ರತೆ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.