ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ ಅಕ್ಟೊಬರ್ 01 ರಂದು ಬೆಳಗ್ಗೆ 10.30 ಗಂಟೆಗೆ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2024 ರ ಸಮಾರಂಭವನ್ನು ಹಾಗೂ ಅಲಿಂಕೋ ವತಿಯಿಂದ ಅಡಿಪ್ ಮತ್ತು ವಯೋಶ್ರೀ ಯೋಜನೆಯಡಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಸಾಧನೆ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಉದ್ಘಾಟನೆ ಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರವ್ಯಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಮಾಡಲಿದ್ದಾರೆ.ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ. ನಾರಾಯಣಸ್ವಾಮಿ,
ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಹೋಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ರವರ ಘನ ಉಪಸ್ಥಿತಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಡಾ. ಕೆ.ಸುಧಾಕರ್, ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಶಾಸಕರಾದ ಎಸ್.ರವಿ, ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಶಾಸಕರಾದ ಪುಟ್ಟಣ್ಣ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್, ವಿಧಾನ ಪರಿಷತ್ ಶಾಸಕರಾದ ಎನ್. ನಾಗರಾಜು(ಎಂಟಿಬಿ), ವಿಧಾನ ಪರಿಷತ್ ಪದವೀಧರರ ಕ್ಷೇತ್ರದ ಶಾಸಕಾರದ ರಾಮೋಜಿ ಗೌಡ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್. ಶ್ರೀನಿವಾಸ್, ಗ್ಯಾರಂಟಿಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಅಧ್ಯಕ್ಷರಾದ ಬಿ. ರಾಜಣ್ಣ, ಮತ್ತಿತರರು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ,ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ ಎಂ ಅವರು ಕಾರ್ಯಕ್ರಮದ ಸ್ವಾಗತಕೋರಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು, ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮನಿರ್ದೇಶಿತ ಸದಸ್ಯರುಗಳು, ಪತ್ರಿಕಾ ಮತ್ತು ಮಾಧ್ಯಮ ಪ್ರತಿನಿಧಿಗಳು ಹಾಗೂ ಪ್ರಗತಿಪರ ಸಂಘಟನೆಗಳು, ಎಲ್ಲಾ ವಿವಿದೊದ್ದೇಶ/ನಗರ/ಗ್ರಾಮೀಣ ಪುಸರ್ವಸತಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.