ದೇವನಹಳ್ಳಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆವತಿಯಿಂದ ಮಹರ್ಷಿ ವಾಲ್ಮೀಕಿ ರವರ ಜಯಂತಿ
ಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನ ಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಪಂ ಸಭಾಂಗಣದಲ್ಲಿಂದು ಆಚರಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ||ಕೆ.ಎನ್ ಅನುರಾಧಾ ಅವರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.ನಂತರ ಸಿ.ಇ.ಓ ಡಾ||ಕೆ.ಎನ್ ಅನುರಾಧಾಮಾತನಾಡಿ ಬೇಡನಾಗಿದ್ದೂ ರಾಮಾಯಣದಂತಹ ಮಹಾಕಾವ್ಯ ಬರೆದ ಶ್ರೀ ಮಹರ್ಷಿ ವಾಲ್ಮೀಕಿ ಸಾರ್ವ ಕಾಲಿಕ ಮಹಾನ್ ಶ್ರೇಷ್ಠರು, ರಾಮಾಯಣವನ್ನು ಇವರು ರಚಿಸದೇ ಇದ್ದಿದ್ದರೆ ನಮಗೆ ಒಳಿತು ಕೆಡಕುಎಂಬ ಜ್ಞಾನ ಇರುತ್ತಿರಲಿಲ್ಲ, ಇವರು ಸಮಾಜಕ್ಕೆ ಜ್ಞಾನ ವಿಜ್ಞಾನ ಕೊಡುಗೆಯಾಗಿ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕರಾದ ವಿಠ್ಠಲ ಕಾವಳೆ, ದೇವನಹಳ್ಳಿ ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥ್ಗೌಡ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಪಾಂಡುರಂಗ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.