ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ ಹೃದಯ ಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಗಾಂಧಿ ಭವನಕ್ಕೆ ಜಿಲ್ಲಾಧಿಕಾರಿ ಪಿ. ಎನ್. ರವೀಂದ್ರ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.
ಮಹಾತ್ಮಾ ಗಾಂಧೀಜಿಯವರ ತತ್ವಾದರ್ಶಗಳು, ಚಿಂತನೆಗಳನ್ನು ಇಂದಿನ, ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ 3 ಕೋಟಿ ವೆಚ್ಚದಲ್ಲಿ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ.
ಅದರಂತೆ ಜಿಲ್ಲೆಯಲ್ಲೂ ಭವನ ನಿರ್ಮಾಣ ಕಾಮಗಾರಿಯುಅಂತಿಮ ಹಂತದಲ್ಲಿದ್ದು ಆದಷ್ಟು ಭೇಗ ಪೂರ್ಣಗೊಳಿಸಲು ಯೋಜನಾ ಅಭಿಯಂತರರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ ಜುಂಜಣ್ಣ, ಯೋಜನಾ ಅಭಿಯಂತರ ತೇಜಸ್ ರೆಡ್ಡಿ ಇದ್ದರು.