ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕಬಳ್ಳಾಪುರ ಜಿಲ್ಲಾ ಶಾಖೆಯ ವತಿಯಿಂದ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಧಿಕಾರಿ ಕಚೇರಿಯಲ್ಲಿ ಸನ್ಮಾನಿಸಲಾಯಿತು.
ಈ ವೇಳೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ಸರ್ಕಾರದ ಯೋಜನೆಗಳು, ಸೇವೆಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಆಡಳಿತ ವರ್ಗದ ಪಾತ್ರ ಮಹತ್ವದ್ದಾಗಿದೆ. ಸರ್ಕಾರದ ಆಶಯಕ್ಕೆ ತಕ್ಕಂತೆ ಉತ್ತಮ ಆಡಳಿತ ನೀಡಲು ಜಿಲ್ಲೆಯ ಎಲ್ಲ ಅಧಿಕಾರಿ ನೌಕರರು ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಶ್ರಮಿಸುತ್ತೇವೆ. ಜಿಲ್ಲಾಡಳಿತ ಎಲ್ಲ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇವೆ ಎಂದು ಜಿಲ್ಲಾಧಿಕಾರಿಗಳಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಮಾತನಾಡಿ, ಜನ ಸಾಮಾನ್ಯರಿಗೆ ಸರ್ಕಾರದ ಸೇವೆಗಳನ್ನು ಸಮರ್ಪಕವಾಗಿ ತಲುಪಿಸುವ ಮೂಲಕ ನಮ್ಮಗಳ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ರೂಪಿಸಬಹುದು. ಆ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯ ನಿಷ್ಠಾ ತೋರಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಖಜಾಂಚಿ ಎಂ.ಅರುಣ್ ಕುಮಾರ್, ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ವಿ. ಅಮರನಾರಾಯಣಸ್ವಾಮಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನಿರ್ದೇಶಕರು, ತಾಲ್ಲೂಕು ಘಟಕದ ಪದಾಧಿಕಾರಿ ಹಾಜರಿದ್ದರು.