ಪಾಂಡವಪುರ : ಜೆಡಿಎಸ್ ಮುಖಂಡ ಹಾಗೂ ಚಿನಕುರಳಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸಿ.ಸಿದ್ದಲಿಂಗೇಗೌಡ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ನಾಯಕತ್ವವನ್ನು ಮೆಚ್ಚಿ ಜೆಡಿಎಸ್ ತೊರೆದು ಸಿ.ಸಿದ್ದಲಿಂಗೇಗೌಡ ಅವರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.
ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಸಿ.ಸಿದ್ದಲಿಂಗೇಗೌಡ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದಿಸುವ ಮೂಲಕ ಕೃಷಿ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮನ್ ಮುಲ್ ನಿರ್ದೇಶಕ ಕೆ.ರಾಮಚಂದ್ರು, ತಾಲೂಕು ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು, ಮುಖಂಡರಾದ ಹರಳಹಳ್ಳಿ ಸಿದ್ದಲಿಂಗಯ್ಯ, ಅಂತನಹಳ್ಳಿ ಬಸವರಾಜು ಇತರರಿದ್ದರು.