ಬೆಂಗಳೂರು: ಜೈನ ಜನಾಂಗದ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಪ್ರತಿ ವರ್ಷ ೨೦೦ಕೋಟಿ ರೂಪಾಯಿ ಹಣವನ್ನು ಜೈನ ಅಭಿವೃದ್ಧಿ ನಿಗಮಕ್ಕೆ ನೀಡಬೇಕು ಎಂದು ಶ್ರೀ ದಿಗಂಬರ ಜೈನ ಗ್ಲೋಬಲ್ ಮಹಾಸಭಾ ಒತ್ತಾಯಿಸಿದೆ.
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಮಹೇಶ್ ಜೈನ್, ಇದುವರೆಗೂ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷ ಸ್ಥಾನ ಜೈನ ಸಮುದಾಯಕ್ಕೆ ದೊರೆತಿಲ್ಲ, ಜೈನ ಸಮುದಾಯದಯವರನ್ನು ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಮಾಡಿಲ್ಲ ತಕ್ಷಣ ಜೈನ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ಹಾಗೂ ಇಬ್ಬರು ನಿರ್ದೇಶಕರನ್ನು ನೇಮಕ ಮಾಡಬೇಕು,ಅದೇ ರೀತಿ ಅಲ್ಪ ಸಂಖ್ಯಾತ ಆಯೋಗದಲ್ಲಿ ಅಧ್ಯಕ್ಷ ಸ್ಥಾನ ಕೂಡ ಜೈನ ಸಮುದಾಯಕ್ಕೆ ದೊರೆತಿಲ್ಲ,ಸದಸ್ಯರನ್ನು ನೇಮಕ ಮಾಡಿಲ್ಲ ಇದನ್ನು ಕೂಡ ರಾಜ್ಯ ಸರ್ಕಾರ ಪರಿಗಣಿಸಬೇಕು ಎಂದರು. ಅಲ್ಪಸಂಖ್ಯಾತ ವಿಭಾಗದಲ್ಲಿ ಇರುವ ಶೇ ೫ರಷ್ಟು ಇರುವ ಮೀಸಲಾತಿಯನ್ನು ಶೇ ೨೦ಕ್ಕೆ ಹೆಚ್ಚಿಸಬೇಕು,ಈ ನಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದಲ್ಲಿ ಪ್ರೀಡಂ ಪಾರ್ಕ್ನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.