ಜೈಪುರ: ರಾಜಸ್ಥಾನದ ಜೈಪುರದಲ್ಲಿ ಕಳೆದ ಶುಕ್ರವಾರ ಗ್ಯಾಸ್ ಟ್ಯಾಂಕರ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಬುಧವಾರ ಮೃತಪಟ್ಟಿದ್ದಾರೆ. ಈ ಮೂಲಕ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಇತರ 16 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಗಳು ಪೈಕಿ ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಎಸ್ ಎಂಎಸ್ ಆಸ್ಪತ್ರೆಯ ಅಧೀಕ್ಷಕರಾದ ಸುಶೀಲ್ ಭಾಟಿಯಾ ತಿಳಿಸಿದ್ದಾರೆ.
ಡಿಸೆಂಬರ್ 20 ರಂದು ಜೈಪುರ- ಅಜ್ಮೀರ್ ಹೆದ್ದಾರಿಯಲ್ಲಿ ಅಡುಗೆ ಅನಿಲ ತುಂಬಿದ ಟ್ಯಾಂಕರ್ ಹಲವು ವಾಹನಗಳಿಗೆ ಗುದ್ದಿದ್ದ ಪರಿಣಾಮ ಅಗ್ನಿ ಅವಘಡ ಸಂಭವಿಸಿತ್ತು.
ಬಳಿಕ ನೋಡ ನೋಡುತ್ತಿದ್ದಂತೆ ಉಂಟಾದ ಬೆಂಕಿಯ ಜ್ವಾಲೆಯಲ್ಲಿ ಸಿಲುಕಿ 11 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು.ಘಟನೆಯಲ್ಲಿ 30 ಕ್ಕೂ ಅಧಿಕ ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು.