ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಪತ್ತೆಯಾಗಿದ್ದು, ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.ಜೈಲಿನ ಅಂಡರ್ ಟ್ರೈಯಲ್ ಬ್ಯಾರೆಕ್ನಲ್ಲಿ ಮೊಬೈಲ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಪರಪ್ಪನ ಅಗ್ರಹಾರ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.
ಪದೇ ಪದೇ ಜೈಲಿನಲ್ಲಿ ಕೈದಿಗಳು ಮೊಬೈಲ್ ಮೂಲಕ ಹೊರಗಿನವರೊಂದಿಗೆ ಸಂಪರ್ಕ ಮಾಡಿ ತಮಗೆ ಬೇಕಾದ ವಸ್ತುಗಳನ್ನು ತರಿಸಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿದ್ದವು. ಆಗಿಂದಾಗೆ ಪೊಲೀಸ್ ಹಿರಿಯ ಅಧಿಕಾರಿಗಳು ಜೈಲಿನ ಮೇಲೆ ದಾಳಿ ನಡೆಸಿದಾಗ ಕೈದಿಗಳ ಬಳಿ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳು ಪತ್ತೆಯಾಗಿದ್ದವು.
ಈ ಹಿನ್ನೆಲೆಯಲ್ಲಿ ಜೈಲಿನ ಅಧಿಕಾರಿಗಳು ತಪಾಸಣೆ ನಡೆಸಿದಾಗ ಅಂಡರ್ ಟ್ರೈಯಲ್ ಬ್ಯಾರೆಕ್ನಲ್ಲಿ ಮೊಬೈಲ್ ಪತ್ತೆ ಆಗಿರುವುದರಿಂದ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.