ಟರ್ಕಿ: ವಾಯುವ್ಯ ಟರ್ಕಿಯಲ್ಲಿರುವ ಸ್ಕೀ ರೆಸಾರ್ಟ್ನ ಹೋಟೆಲ್ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 76 ಜನರು ಸಾವನ್ನಪ್ಪಿದ್ದಾರೆ. ಸುಮಾರು 32 ಮಂದಿ ಗಾಯಗೊಂಡಿದ್ದಾರೆ.ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್ನ ರೆಸ್ಟೋರೆಂಟ್ನಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಹೋಟೆಲ್ ಬೆಂಕಿಗೆ ಆಹುತಿಯಾಯಿತು. ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ.
ರೆಸಾರ್ಟ್ನಲ್ಲಿದ್ದ ಇಬ್ಬರು ಭಯಭೀತರಾಗಿ ಕಟ್ಟಡದಿಂದ ಹಾರಿ ಸಾವನ್ನಪ್ಪಿದ್ದಾರೆ. ಕೆಲವು ಜನರು ಬೆಡ್ರೂಂನ ಬೆಡ್ಶೀಟ್ಗಳನ್ನು ಬಳಸಿ ತಮ್ಮ ಕೋಣೆಗಳಿಂದ ಕೆಳಗೆ ಇಳಿಯಲು ಪ್ರಯತ್ನಿಸಿದ್ದಾರೆ. ಹೋಟೆಲ್ನಲ್ಲಿ 234 ಅತಿಥಿಗಳು ತಂಗಿದ್ದರು ಎಂದು ಸ್ಥಳೀಯ ಮಾಧ್ಯಮಗಳು ಹೇಳಿವೆ. ಬದುಕುಳಿದವರು ತಮ್ಮ ಭಯಾನಕ ಅನುಭವಗಳನ್ನು ಹಂಚಿಕೊಂಡಿದ್ದಾರೆ.
ಬೆಂಕಿಯಿಂದ ಹೋಟೆಲ್ ಹೊಗೆಯಿಂದ ಆವೃತವಾಗಿತ್ತು, ಅತಿಥಿಗಳು ಬೆಂಕಿಯಿಂದ ತಪ್ಪಿಸಿಕೊಳ್ಳುವ ಸ್ಥಳವನ್ನು ಹುಡುಕಾಡುತ್ತಿದ್ದರು.
ಕಾರ್ತಲ್ಕಯಾ ಇಸ್ತಾನ್ಬುಲ್ನಿಂದ ಪೂರ್ವಕ್ಕೆ ಸುಮಾರು 300 ಕಿಲೋಮೀಟರ್ ದೂರದಲ್ಲಿರುವ ಪರ್ವತದಲ್ಲಿರುವ ಜನಪ್ರಿಯ ಸ್ಕೀ ರೆಸಾರ್ಟ್ ಆಗಿದೆ. ಬೆಂಕಿ ಅವಘಡ ಸಂಭವಿಸಿದ ಸಮಯದಲ್ಲಿ ಈ ಪ್ರದೇಶದಲ್ಲಿ ಹೋಟೆಲ್ಗಳು ಜನರಿಂದ ತುಂಬಿದ್ದವು. 30 ಅಗ್ನಿಶಾಮಕ ವಾಹನಗಳು ಮತ್ತು 28 ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.