ದೊಡ್ಡಬಳ್ಳಾಪುರ: ಅರಳುಮಲ್ಲಿಗೆ ಗ್ರಾಮದ ವೆಂಕಟೇಶ್ ಅವರು ಟಿಎಪಿಎಂಸಿಎಸ್ನ ನೂತನ ಅದ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ಮಾರೇ ಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಇಲಾಖೆಯ ಅಧಿಕಾರಿಶಿವಕುಮಾರ್ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ನೂತನವಾಗಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ವೆಂಟಕೇಶ್ ಮಾತನಾಡಿ ಅವಿರೋಧವಾಗಿ ಆಯ್ಕೆ ಮಾಡಿದ ಸಹಕಾರಿ ಸಂಘದ ಎಲ್ಲಾ ನಿರ್ದೇಶಕರಿಗೆ ಧನ್ಯವಾದಗಳನ್ನು ತಿಳಿಸಿದ ಅವರು ಟಿಎಪಿಎಂಸಿಎಸ್ ನ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು ಎಲ್ಲರ ಸಹಕಾರದಿಂದ ಉತ್ತಮ ಆಡಳಿತ ನೀಡಲಾಗುವುದು ಎಂದರು.
ಈ ವೇಳೆ ಮುಖಂಡರುಗಳಾದ ಚುಚಂಚೇಗೌಡ, ಸಿದ್ರಾಮಣ್ಣ, ಗೋವಿಂದರಾಜು, ಮಾರೇಗೌಡ, ದಯಾನಂದ, ಲಕ್ಷ್ಮೀನಾರಾಯಣ್, ಅರವಿಂದ್, ಆನಂದ್ ಚಂದ್ರಕಲಾ ರಾಮಾಂಜಿನಪ್ಪ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.