ಟಿ20 ಲೀಗ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಟ್ರೋಫಿ ಖಾತೆ ತೆರೆದಿದೆ. ಈ ಹಿಂದೆ ಐಪಿಎಲ್ನಲ್ಲಿ ಹಾಗೂ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಫೈನಲ್ಗೆ ಪ್ರವೇಶಿಸಿದರೂ ಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಒಡೆತನ ದುಬೈ ಕ್ಯಾಪಿಟಲ್ಸ್ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ.
ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ದುಬೈ ಕ್ಯಾಪಿಟಲ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಸರ್ಟ್ ವೈಪರ್ಸ್ ತಂಡವನ್ನು 4 ವಿಕೆಟ್ಗಳಿಂದ ಮಣಿಸಿ ದುಬೈ ಕ್ಯಾಪಿಟಲ್ಸ್ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಜಯಿಸಿದ ದುಬೈ ಕ್ಯಾಪಿಟಲ್ಸ್ ತಂಡದ ನಾಯಕ ಸ್ಯಾಮ್ ಬಿಲ್ಲಿಂಗ್ಸ್ ಬೌಲಿಂಗ್ ಆಯ್ದುಕೊಂಡಿದ್ದರು.