ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅದು ಕೂಡ ಭಾರತ ತಂಡದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಸತತ ಪಂದ್ಯಗಳನ್ನು ಗೆದ್ದ ವಿಶೇಷ ದಾಖಲೆಯೊಂದು ಟೀಮ್ ಇಂಡಿಯಾ ಹೆಸರಿನಲ್ಲಿತ್ತು. ಈ ವಿಶ್ವ ದಾಖಲೆಯನ್ನು ಇದೀಗ ಸೌತ್ ಆಫ್ರಿಕಾ ತಂಡ ಸರಿಗಟ್ಟಿದೆ. ಅದು ಕೂಡ ಪಾಕಿಸ್ತಾನ್ ತಂಡವನ್ನು 2-0 ಅಂತರದಿಂದ ಬಗ್ಗು ಬಡಿಯುವ ಮೂಲಕ ಎಂಬುದು ವಿಶೇಷ.