ಭರತ್ ಗೌಡ ಹೊಸಕೋಟೆ ನಿರ್ಮಾಣದ, ಶ್ರೀವಿದ ನಿರ್ದೇಶನದ ಹಾಗೂ ಹಾಸ್ಯನಟನಾಗಿ ಜನಮನ ಗೆದ್ದಿರುವ ಕೆಂಪೇಗೌಡ ಪ್ರಮುಖಪಾತ್ರದಲ್ಲಿ ನಟಿಸಿರುವ “ಕಟ್ಲೆ” ಚಿತ್ರದ ಮೊದಲ ಹಾಡನ್ನು ನಟ ಡಾರ್ಲಿಂಗ್ ಕೃಷ್ಣ ಇತ್ತೀಚೆಗೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.
ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ” ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.ಹಾಸ್ಯನಟನಾಗಿದ್ದ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ನಾಯಕನನ್ನಾಗಿ ಮಾಡಿದ ನಿರ್ಮಾಪಕ ಭರತ್ ಗೌಡ ಅವರಿಗೆ ನಾನು ಆಭಾರಿ ಎಂದು ಮಾತು ಆರಂಭಿಸಿದ ನಾಯಕ ಕೆಂಪೇಗೌಡ, ಶ್ರೀವಿದ ಅವರು “ಕಟ್ಲೆ” ಚಿತ್ರಕ್ಕೆ ಅದ್ಭುತವಾದ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಇಂದು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚೇತನ್ ಕುಮಾರ್ ಬರೆದು ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿರುವ ಈ ಹಾಡು ಎಲ್ಲರಿಗೂ ಮೆಚ್ಚುಗೆಯಾಗಲಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಡಾರ್ಲಿಂಗ್ ಕೃಷ್ಣ ಅವರಿಗೆ ಧನ್ಯವಾದ ಎಂದರು. ಈ ಚಿತ್ರ ಉತ್ತಮವಾಗಿ ಮೂಡಿಬರಲು ಮುಖ್ಯ ಕಾರಣ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿರುವ ಭರತ್ ಗೌಡ ಅವರು. ಅವರು ನಮ್ಮ ಮೇಲೆ ನಂಬಿಕೆಯಿಟ್ಟು ಬಂಡವಾಳ ಹಾಕಿರುವುದೇ ನಮ್ಮ ಕನಸು ನನಸಾಗಲು ಕಾರಣ.