ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳ ವಿಚಾರ ವೇದಿಕೆ ವತಿಯಿಂದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಡಾ.ರಾಜಕುಮಾರ್ ವಾರ್ಡಿನ ಅಗ್ರಹಾರ ದಾಸರಹಳ್ಳಿಯ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿರುವ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಮೂಲಕ ಸಂವಿಧಾನದ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತ ಸಂವಿಧಾನ ಜನರನ್ನು ಸಶಕ್ತಗೊಳಿಸಿದೆ.
ಸರ್ವರಿಗೂ ಸಮಾನತೆ ಒದಗಿಸಿದೆ. ಮೂಲಭೂತ ಹಕ್ಕುಗಳನ್ನು ನೀಡಿದೆ. ಕರ್ತವ್ಯಗಳನ್ನು ನೀಡಿದೆ. ಭಾರತಕ್ಕೆ ಸಂವಿಧಾನವೇ ಬಹುದೊಡ್ಡ ಬಲ. ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು. ವೈವಿಧ್ಯಗಳ ಸಂಗಮ ನಮ್ಮ ಸಂವಿಧಾನ ಎಂದು ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳ ವಿಚಾರ ವೇದಿಕೆ ಅಧ್ಯಕ್ಷ ರ. ನರಸಿಂಹಮೂರ್ತಿ ತಿಳಿಸಿದರು.
ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಪ್ರತಿ ವರ್ಷ ನವೆಂಬರ್ 26 ರಂದು ಭಾರತದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. ಭಾರತದ ಸಂವಿಧಾನ ಸಭೆಯು ನವೆಂಬರ್ 26, 1949 ರಂದು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ನಮ್ಮ ದೇಶದಲ್ಲಿ ಹೊಸ ಶಕೆ ಆರಂಭವಾಗಿದ್ದು ಸಂವಿಧಾನ ಜಾರಿಗೆ ಬಂದಾಗಿನಿಂದಲೇಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಜತೆಗೆ ಅವರ ಸಾಧನೆಯ ಜಾಗೃತಿ ಮೂಡಿಸುವುದು ಈ ದಿನದ ವಿಶೇಷತೆ.
ಭಾರತ ಸಂವಿಧಾನಕ್ಕೆ ಜಗತ್ತಿನಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆಯೂ ಇದೆ ಎಂದು ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳ ವಿಚಾರ ವೇದಿಕೆ ಪ್ರಧಾನ ಕಾರ್ಯದರ್ಶಿ ಕೆ ವಿ ಸಂದೀಪ್ ಹೇಳಿದರು.ಈ ವೇಳೆ ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳ ವಿಚಾರ ವೇದಿಕೆಯ ಪದಾಧಿಕಾರಿಗಳಾದ ಪುರುಷೋತ್ತಮ್, ಸಿ. ಶಿವಶಂಕರ್, ಅ.ರಾಮಾಂಜನೇಯ, ಡಿ ಸಿ ಯತೀಶ್, ಕೇಶವರಾಜ್, ಕೆ ಟಿ ಗೌಡಯ್ಯ, ಹರೀಶ್. ವೈ, ಲಕ್ಷ್ಮಣ್ ನೆಲಸೊಗಡು, ಪರಿಸರ ರಾಮು. ಜಿ ಮತ್ತಿತರರು ಹಾಜರಿದ್ದರು.