ಭಾರತದ ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. 1932ರ ಸೆಪ್ಟೆಂಬರ್ 26ರಂದು ಜನಿಸಿದ ಅವರಿಗೆ 92 ವರ್ಷ ತುಂಬಿತ್ತು.ಕಷ್ಟಪಟ್ಟು ಮೇಲೆ ಬಂದ ಅಪ್ರತಿಮ ಪ್ರತಿಭಾವಂತ ಮನಮೋಹನ್ ಸಿಂಗ್ ಆಕ್ಸ್ ವರ್ಡ್ ವಿಶ್ವವಿದ್ಯಾಲಯದ ಡಾಕ್ಟರೇಟ್ ಪಡೆದಾತ, ವಿಶ್ವಸಂಸ್ಥೆಯಲ್ಲಿ ಉದ್ಯೋಗ ಮಾಡಿದಾತ, ಅರ್ಥಶಾಸ್ತ್ರಜ್ಞ, ಸಲಹೆಗಾರ, ಯೋಜನಾ ಆಯೋಗದ ಉಪಾಧ್ಯಾಕ್ಷ, ರಿಸರ್ವ್ ಬ್ಯಾಂಕ್ ಮುಖ್ಯಸ್ಥ,
ದೇಶವನ್ನು ಲೈಸೆನ್ಸ್ ರಾಜ್ ಮುಷ್ಠಿಯಿಂದ ಬಿಡುಗಡೆಯ ಹಾದಿಗೆ ತಂದ ಧೀಮಂತ ಹಣಕಾಸು ಮಂತ್ರಿ, ಜವಹರಲಾಲ್ ನೆಹರೂ ನಂತರ ಐದು ವರ್ಷ ಅವಧಿ ಪೂರೈಸಿ ಮತ್ತೊಂದು ಅವಧಿಗೆ ಪ್ರಧಾನಿಯಾದ ಕೀರ್ತಿ ಇವೆಲ್ಲವೂ ಡಾ. ಮನಮೋಹನ್ ಸಿಂಗ್ ಅವರ ಹೆಗ್ಗಳಿಕೆಯಾಗಿದ್ದವು.ಮನಮೋಹನ್ ಸಿಂಗ್ ಅವರ ಶ್ರಮ ವಂದನಾರ್ಹವಾದುದು. ಅಗಲಿದ ಬುದ್ಧಿವಂತ, ಪ್ರಾಮಾಣಿಕರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆತ್ಮಕ್ಕೆ ಸಾಷ್ಟಾಂಗ ನಮನ.