ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ ಅವರು ಡಿಕೆ ಶಿವಕುಮಾರ್ ಯಾಕೆ ದೆಹಲಿಗೆ ಹೋಗಿದ್ದಾರೆ ಅಂತ ಗೊತ್ತಿಲ್ಲ, ಇವತ್ತು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಇರೋದ್ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೋಗುತ್ತಿದ್ದಾರೆ,
ಕಾರ್ಯಕಾರಿಣಿ ಸಭೆಗೆ ಕಾಂಗ್ರೆಸ್ ಆಡಳಿತ ರಾಜ್ಯಗಳ ಮುಖ್ಯಮಂತ್ರಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನು ಕರೆಯುವುದು ವಾಡಿಕೆ, ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ನಡೆಯಬಹುದು ಎಂದು ಹೇಳಿದರು.
ತಾವು ಕಳೆದ 35 ವರ್ಷಗಳಿಂದ ಪಕ್ಷ ನೀಡುವ ಸೂಚನೆಯಂತೆ ಕಾರ್ಯನಿರ್ವಹಿಸುತ್ತ ಬಂದಿರುವುದಾಗಿ ತಿಳಿಸಿದ ಪರಮೇಶ್ವರ್ ಈಗಲೂ ಸಹ ಪಕ್ಷ ಸೂಚಿಸುವ ಜವಾಬ್ದಾರಿಯನ್ನು ನಿಭಾಯಿಸುವೆ ಎಂದು ಖಾತೆ ಬದಲಾವಣೆ ಸಂಬಂಧ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.