ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಕೇಂದ್ರ ಸಚಿವ ಎಚ್.ಡಿ.ಕೆ ನಡುವಿನ ವಾಕ್ಸಮರ ಮುಂದುವರಿದಿದೆ.
ಜೆಡಿಎಸ್ ಬಿಜೆಪಿ ವತಿಯಿಂದ ಮುಡಾ ಹಗರಣದ ವಿರುದ್ಧ ಬೆಂಗಳೂರಿನಿಂದ ಮೈಸೂರು ವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಯ ಮುರನೇ ದಿನವಾದ ಇಂದು ಬೆಳಿಗ್ಗೆ ಸುದ್ದಿವಾಹಿನಿಯೊಂದರ ಪ್ರತಿನಿಧಿಯೊಂದಿಗೆ ಮಾತನಾಡಿದ ಕುಮಾರಸ್ವಾಮಿ ಪ್ರಾಯಶ್ಚಿತ ಮಾಡಿಕೊಳ್ಳಬೇಕಾಗಿದ್ದು ಡಿಕೆ ಶಿವಕುಮಾರ್ ಎಂದು ಹೇಳಿದ್ದಾರೆ.
ತಪ್ಪು ಮಾಡಿಕೊಂಡು ಪ್ರಾಯಶ್ಚಿತ ಮಾಡಿಕೊಳ್ಳಲ್ಲ ಎಂದು ಬಂಡ ಮಾತು ಆಡಿರುವ ಡಿ.ಕೆ.ಶಿವಕುಮಾರ್…ಮಾತಿಗೆ ಯಾರು ಬೆಲೆ ಕೊಡುತ್ತಿಲ್ಲ. ಅವರು ಏಕೆ ಹೀಗೆ ಮಾತನಾಡುತ್ತಿದ್ದಾರೆ. ಆ ಮನುಷ್ಯನಿಗೆ ಏನಾಯ್ತು, ಡಿಕೆ ಶಿವಕುಮಾರ್ ಈಗಿನ ಪರಿಸ್ಥಿತಿ ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ ಎಂದು ಮರುಕ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಉಪಮುಖ್ಯಮಂತ್ರಿಯಾಗಿ ಜನರ ಸಮಸ್ಯೆ ಬಗೆಹರಿಸುವುದು ಬಿಟ್ಟು ನನ್ನನ್ನು ಗುಣಗಾನ ಮಾಡಿಕೊಂಡು ಕೂತಿದ್ದಾರೆ. ಮಾತನಾಡಲು ಶಕ್ತಿ ಇಲ್ಲ ಹುಚ್ಚರಂತೆ ಪದ ಬಳಕೆ ಮಾಡಿಕೊಂಡು ಹೋಗುತ್ತಿದ್ದಾರೆ. ನನ್ನ ಹತ್ತಿರ ಇರುವ ದಾಖಲೆ ತೆಗೆದರೆ ಈ ವ್ಯಕ್ತಿ ಮಾಡಿರುವ ಅವ್ಯವಹಾರದ ಸಂಪುಟವನ್ನೇ ಮಾಡಬಹುದು.
ಏನೇನು ಕಟ್ಟಿಕೊಂಡಿದ್ದೀರಿ ಎಲ್ಲವನ್ನ ಬಿಚ್ಚಲಿ ನಿಮ್ಮ ಗೊಡ್ಡು ಬೆದರಿಕೆಗೆ ನಾನು ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.ಈ ಸರ್ಕಾರದ ಪಾಪದ ಕೊಡ ತುಂಬಿದೆ ಸರ್ಕಾರ ಪತನವಾಗುವ ಸಮಯ ಹತ್ತಿರವಾಗಿದೆ. ಅಧಿಕಾರ ಮಾಡಲು ನಿಮಗೆ ಯೋಗ್ಯತೆ ಇದೆಯಾ ಯಡಿಯೂರಪ್ಪರನ್ನ ನಾನು ಜೈಲಿಗೆ ಕಳಿಸಿಲ್ಲ ಅವತ್ತಿನ ಸಂದರ್ಭದಲ್ಲಿ ವಿಚಾರ ಹಾಗಿತ್ತು ಎಂದಿದ್ದಾರೆ.