ಬೆಂಗಳೂರು: ತಮ್ಮ ತಮ್ಮನ ಸೋಲಿನ ಬಗ್ಗೆ ಮನಬಿಚ್ಚಿ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ತಮ್ಮನ ಸೋಲನ್ನ ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.
ನಾನು ಯಾವತ್ತು ನನ್ನ ತಮ್ಮ ಲೋಕಸಭೆ ಚುನಾವಣೆಯಲ್ಲಿ ಸೋಲುತ್ತಾನೆ ಅಂದುಕೊಂಡಿರಲಿಲ್ಲ. ಕಳೆದ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ನಿಂದ ನನ್ನ ತಮ್ಮ ಒಬ್ಬನೆ ಗೆಲುವು ಸಾಧಿಸಿದ್ದ. ನನಗೆ ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ಅನುಮಾನವಿದೆ. ಬಹಳಷ್ಟು ಷಡ್ಯಂತ್ರವಾಗಿತ್ತು, ಹಣ ಹಂಚಲಾಗಿತ್ತು. ಕೊನೆಗೆ ನಾವು ಫಲಿತಾಂಶವನ್ನ ಒಪ್ಪಿಕೊಳ್ಳಬೇಕಾಯಿತು, ಒಪ್ಪಿಕೊಂಡೆವು. ನನಗೆ ಇನ್ನು ತಮ್ಮನ ಸೋಲನ್ನ ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.
ಚನ್ನಪಟ್ಟಣ ಕ್ಷೇತ್ರ ಖಾಲಿಯಾದ ಮೊದಲದಿನದಿಂದ ಕೆಲಸ ಮಾಡಿದ್ದೇನೆ. ನನಗೆ ಚುನಾವಣೆ ಮಾಡೊದು ಗೊತ್ತಿದೆ. ನಾನು ನಿರಂತರವಾಗಿ ಎಂಟು ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ. ಕುಮಾರಸ್ವಾಮಿ ಎಂಟು ಬಾರಿ ಚುನಾವಣೆಗೂ ಸ್ಪರ್ಧಿಸಿಲ್ಲ. ಎರಡು ಮೂರು ಜನರನ್ನ ಬಿಟ್ಟರೆ ಯಾರು ಸ್ಪರ್ಧಿಸಿಲ್ಲ ಎಂದು ತಿಳಿಸಿದ್ದಾರೆ.