ಅನೇಕಲ್: ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ನಡೆದಿದೆ. ಮಹಾಲಕ್ಷ್ಮಿ (41) ಕೊಲೆಯಾದ ಮಹಿಳೆ. ರಮೇಶ್ (21) ತಾಯಿಯನ್ನ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಮಗ. ಚಿತ್ರದುರ್ಗ ಮೂಲದ ಚಳ್ಳಕೆರೆಯ ಚಿಕ್ಕಹಳ್ಳಿ ಕುಟುಂಬ, ಕಳೆದ ಕೆಲ ವರ್ಷಗಳ ಹಿಂದೆ ಕೆಲಸ ಅರಸಿಕೊಂಡು ಬಂದಿದ್ದರು. ಆದ್ರೆ, ಮಗ ಕುಡಿದುಬಂದು ತಾಯಿ ಜೊತೆ ಜಗಳ ಮಾಡುತ್ತಿದ್ದ. ಅದರಂತೆ ನಿನ್ನೆಗಲಾಟೆ ವಿಕೋಪಕ್ಕೆ ತಿರುಗಿದ್ದು, ಮೊಬೈಲ್ ಚಾರ್ಜರ್ ವೈರ್ನಿಂದ ತಾಯಿ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ.