ಬೆಂಗಳೂರು: ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ದಾರುಣ ಸಾವು ಸಂಭವಿಸಿದೆ. ಈ ವಿಚಾರವಾಗಿ ನಗರದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದು, ನಾಳೆ ವೈಕುಂಠ ಏಕಾದಶಿ ಇರುವುದರಿಂದ ಹೆಚ್ಚಿನ ಭಕ್ತರು ಹೋಗಿದ್ದಾರೆ. ತಿಮ್ಮಪ್ಪನ ದರ್ಶನಕ್ಕೆ ಹೆಚ್ಚಿನ ಭಕ್ತರು ಹೋಗಿದ್ದರಿಂದ ದುರಂತ ಸಂಭವಿಸಿದೆ. ದುರಂತದ ಬಗ್ಗೆ ನಮ್ಮ ಇಒರಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಕರ್ನಾಟಕದಿಂದ ಹೋಗಿರುವ ಭಕ್ತರಿಗೆ ಯಾವುದೇ ತೊಂದರೆ ಆಗಿಲ್ಲ. ಭಕ್ತರಿಗೆ ಮೂಲ ಸೌಕರ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಅಂತಾ ಇಒ ತಿಳಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಆಡಳಿತ ಮಂಡಳಿ ಹೆಚ್ಚು ಜಾಗ್ರತೆ ವಹಿಸಬೇಕು ಎಂದು ಹೇಳಿದ್ದಾರೆ.