ನವದೆಹಲಿ: ಪುಷ್ಪ 2’ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ನ ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ಇದೇ ತಿಂಗಳ ಡಿಸೆಂಬರ್ 4 ರಂದು ನಡೆದ ʻಪುಷ್ಪ 2: ದಿ ರೂಲ್ʼನ ಪ್ರೀಮಿಯರ್ ಶೋ ವೇಳೆ ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ (39) ಎಂಬ ಮಹಿಳೆ ಸಾವನ್ನಪ್ಪಿದ್ದರು. ಅವರ 9 ವರ್ಷದ ಮಗ ಕಾಲ್ತುಳಿತಕ್ಕೆ ಸಿಕ್ಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಸಹ ಆರೋಪಿಯಾಗಿದ್ದರು. ಇಂದು ಬಂಧಿಸಿ, ಚಿಕ್ಕಡಪಲ್ಲಿ ಠಾಣೆಗೆ ಕರೆದೊಯ್ದಿದ್ದಾರೆ.
ಈ ಪ್ರಕರಣ ವಜಾಗೊಳಿಸುವಂತೆ ನಟ ಈಗಾಗಲೇ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈನಡುವೆ ಚಿಕ್ಕಡಪಲ್ಲಿ ಪೊಲೀಸರು ಏಕಾಏಕಿ ಬಂಧಿಸಿದ್ದಾರೆ. ಇದು ಪುಷ್ಪಾ-2 ಸಕ್ಸಸ್ ಸಂಭ್ರಮದಲ್ಲಿರುವ ಚಿತ್ರತಂಡಕ್ಕೆ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಶಾಕ್ ಕೊಟ್ಟಂತಾಗಿದೆ.