ಇತ್ತೀಚಿನ ದಿನಗಳಲ್ಲಿ ಹೊಸ ಆಲೋಚನೆಯ ನಿರ್ದೇಶಕರು ತಮ್ಮ ವಿಭಿನ್ನ ಮತ್ತು ವೈವಿಧ್ಯಮಯ ಕಥೆಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ. ಕಂಟೆAಟ್ ಆಧಾರಿತ ಚಿತ್ರಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ವಾನರ ಸೆಲ್ಯುಲಾಯ್ಡ್ ಎಂಬ ಹೊಸ ನಿರ್ಮಾಣ ಸಂಸ್ಥೆ ಹೆಜ್ಜೆ ಇಟ್ಟಿದೆ. ಪ್ರೇಕ್ಷಕರಿಗೆ ವಿಭಿನ್ನ ಅನುಭವ ನೀಡುವ ಉದ್ದೇಶದಿಂದ ಈ ಸಂಸ್ಥೆ ಹುಟ್ಟಿಕೊಂಡಿದ್ದು, ಒಂದಿಷ್ಟು ವೈವಿಧ್ಯಮಯ ಚಿತ್ರಗಳನ್ನು ನಿರ್ಮಿಸುತ್ತಿದೆ. ಅದರ ಮೊದಲ ಹಂತವಾಗಿ, `ತ್ರಿಬಾಣಧಾರಿ ಬಾರ್ಬರಿಕ’ ಎಂಬ ಚಿತ್ರ ತಯಾರಾಗುತ್ತಿದ್ದು, ಈ ಚಿತ್ರವನ್ನು ವಿಜಯಪಾಲ್ ರೆಡ್ಡಿ ಅಡಿಧಲ ನಿರ್ಮಿಸಿದರೆ, ಮೋಹನ್ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದಾರೆ. ಜನಪ್ರಿಯ ನಿರ್ದೇಶಕ ಮಾರುತಿ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಪ್ರತಿಭಾವಂತ ಕಲಾವಿದರ ಮತ್ತು ತಂತ್ರಜ್ಞರ ದಂಡೇ ಈ ಚಿತ್ರದಲ್ಲಿದೆ. ಕನ್ನಡಿಗ ವಸಿಷ್ಠ ಸಿಂಹ ಸಹ ಈ ಪ್ಯಾನ್ ಇಂಡಿಯಾ ಚಿತ್ರದ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.
ಇತ್ತೀಚೆಗೆ `ತ್ರಿಬಾಣಧಾರಿ ಬಾರ್ಬ ರಿಕ’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿ ದ್ದು, ಇದರ ಮೂಲಕ ಚಿತ್ರದ ಕಥಾವಸ್ತುವನ್ನು ಪರಿಚಯಿಸಲಾಗಿದೆ. ಪೌರಾಣಿಕ ಮತ್ತು ಸಾಮಾಜಿಕ ಅಂಶಗಳು ಬೆರೆತಿರುವ ಕಥೆ ಇದಾ ಗಿದೆ. ಭೀಮನ ಮೊಮ್ಮಗ ಮತ್ತು ಘಟೋತ್ಕಚನ ಮಗ ಬಾರ್ಬರಿಕನ ಕಥೆ ಯನ್ನು ಈ ಚಿತ್ರದಲ್ಲಿ ಹೇಳಲಾಗಿದೆ. ಮೂರು ಬಾಣಗಳನ್ನು ಏಕಕಾಲಕ್ಕೆ ಹೂಡುವ ಬಾರ್ಬರಿಕನ ಅದ್ಭುತ ಪರಾಕ್ರಮವನ್ನು ಈ ಮೋಷನ್ ಪೋಸ್ಟರ್ ನಲ್ಲಿ ವಿವರಿಸಲಾಗಿದೆ.
ಈ ಜಗತ್ತು ಗಮನಿಸದ ಒಬ್ಬ ಮಹಾವೀರನ ಕಥೆ ಇದು ಎಂದು ಈ ಪೋಸ್ಟರ್ ನಲ್ಲಿ ಬಣ್ಣಿಸಲಾಗಿದೆ. ಒಂದು ಕಡೆ ಪೌರಾಣಿಕ ಕಥೆ ಹೇಳುತ್ತಲೇ, ಇನ್ನೊಂದು ಕಡೆ ಆಧುನಿಕ ಸ್ಪರ್ಶ ಸಹ ನೀಡಲಾಗಿದೆ. ಗಾಂಢೀವಧಾರಿ ಅರ್ಜುನ, ಪಾಶುಪತಾಸ್ತçಂ, ಬ್ರಹ್ಮಾಸ್ತçಂ, ಗರುಡ ಪುರಾಣಂ ಮುಂತಾದ ಪುಸ್ತಕಗಳ ಜೊತೆಗೆ ಗನ್ ಸಹ ತೋರಿಸಲಾಗಿದೆ. ಈ ಮೂಲಕ ಪೌರಾಣಿಕ ಮತ್ತು ಸಮಕಾಲೀನ ವಿಷಯಗಳನ್ನು ಈ ಚಿತ್ರದಲ್ಲಿ ಹೇಳಿರುವ ಸೂಚನೆ ನೀಡಲಾಗಿದೆ.
ಈ ಮೋಷನ್ ಪೋಸ್ಟರ್, ಚಿತ್ರದ ಬಗ್ಗೆ ನಿರ್ದೇಶಕರಿಗಿರುವ ಒಳನೋಟ ಮತ್ತು ಒಂದೊಳ್ಳೆಯ ಚಿತ್ರವನ್ನು ಪ್ರೇಕ್ಷಕರಿಗೆ ನೀಡ ಬೇಕೆಂಬ ನಿರ್ಮಾಪಕರನ್ನು ಬದ್ಧತೆಯನ್ನು ಎತ್ತಿಹಿಡಿಯುತ್ತಿದೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಇನ್ಫೂ÷್ಯಷನ್ ಬ್ಯಾಂಡ್ ಎಂಬ ಸಂಗೀತ ತಂಡವು ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದೆ.