ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಬಂಧಿತರಾಗಿ ಜಾಮೀನು ಪಡೆದಿರುವ ನಟ ದರ್ಶನ್ ಇಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಶುಕ್ರವಾರವಷ್ಟೇ ಮಧ್ಯಂತರ ಜಾಮೀನು ಬದಲಿಗೆ ಪೂರ್ಣ ಜಾಮೀನು ಪಡೆದ ದರ್ಶನ್ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮಿ ಮನೆಗೆ ಆಗಮಿಸಿದ್ದಾರೆ.ಶಸ್ತ್ರ ಚಿಕಿತ್ಸೆಗೆಂದು ವಕೀಲರ ವಾದದ ಹಿನ್ನೆಲೆಯಲ್ಲಿ ಜಾಮೀನು ಪಡೆದಿದ್ದ ದರ್ಶನ್ ಇದುವರೆಗೂ ಶಸ್ತ್ರ ಚಿಕಿತ್ಸೆಗೆ ಒಳಗಾಗಿಲ್ಲ ಎಂದು ಹೇಳಲಾಗಿದೆ.