ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯದಿಂದ ಮಧ್ಯಂತರಜಾಮೀನು ಪಡೆದಿರುವ ನಟ ದರ್ಶನ್ ಅವರ ಜಾಮೀನ ರದ್ದು ಪಡಿಸುವಂತೆ ಮವನಿ ಮಾಡಲು ಅರ್ಜಿ ಸಲ್ಲಿಕೆಗೆ ಪೊಲೀಸರು ಸಿದ್ಧತೆ
ನಡೆಸಿದ್ದಾರೆ.
ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಅನುಮತಿ ಕೋರಿ ಪೊಲೀಸರು ರಾಜ್ಯ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.
ನಗರ ಪೊಲೀಸ್ ಆಯುಕ್ತ ದಯಾನಂದ್ರವರು ಪತ್ರ ಬರೆದಿದ್ದು, ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಲು ಅನುಮತಿ ಕೋರಿದ್ದಾರೆ.
ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಮಧ್ಯಂತರ ಜಾಮೀನು ಪ್ರಶ್ನಿಸಲು ಇದೀಗ ಪೊಲೀಸರು ಹೆಜ್ಜೆಯಿಟ್ಟಿದ್ದು,
ಮೊದಲು ಕಾನೂನು ಸಲಹೆ ಪಡೆದು ಇದೀಗ ಗೃಹ ಇಲಾಖೆಗೆ ಅನುಮತಿ ಕೋರಿ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ರಾಜ್ಯ ಗೃಹ ಇಲಾಖೆ ಈ ಪತ್ರವನ್ನು ಕಾನೂನು ಇಲಾಖೆಗೆ ರವಾನಿಸಲಿದೆ. ಆ ನಂತರ ಗೃಹ ಇಲಾಖೆಯಿಂದ ಅನುಮತಿಯ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ.