ದೆಹಲಿ: ದೆಹಲಿ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆ ಸಂಬಂಧ ಇಂದು ಬೆಳಿಗ್ಗಿನಿಂದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಸಂಜೆ 6.30ರವರೆಗೆ ನಡೆಯಲಿದೆ.
ಮತದಾನ ಪ್ರಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ಗಾಂಧಿ ದೆಹಲಿ ಮುಖ್ಯಮಂತ್ರಿ ಅತಿಶಿ, ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತಿತರ ಪ್ರಮುಖ ಗಣ್ಯರು ಪಾಲ್ಗೊಂಡಿದ್ದಾರೆ.ಮತದಾನಕ್ಕಾಗಿ 13 ಸಾವಿರಕ್ಕೂ ಹೆಚ್ಚು ಮತ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 1.56 ಕೋಟಿ ಮತದಾರರು ಮತಚಲಾಯಿಸಲಿದ್ದಾರೆ.
70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ತ್ರಿಕೋಣ ಸ್ಪರ್ಧೆ ಏರ್ಪಟ್ಟಿದೆ.ಆಮ್ ಆದ್ಮಿ ಪಕ್ಷದಿಂದ 70, ಬಿಜೆಪಿಯಿಂದ 68 ಹಾಗೂ ಕಾಂಗ್ರೆಸ್ ಪಕ್ಷದಿಂದ 70 ಮಂದಿ ಸ್ಪರ್ಧಾಳುಗಳು ಚುನಾವಣಾ ಕಣದಲ್ಲಿದ್ದಾರೆ.ಈ ತಿಂಗಳ 8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರ ಬೀಳಲಿದೆ.