ದೆಹಲಿ: ದೆಹಲಿಯ ಗಾಳಿಯ ಗುಣಮಟ್ಟ ಸತತ ಎರಡನೇ ದಿನವೂ “ತೀವ್ರ” ಕುಸಿತ ದಾಖಲಾಗಿದ್ದು, ಕೇಂದ್ರ ಮಾಲಿನ್ಯ ನಿಗಾ ಸಂಸ್ಥೆ ಮೂರನೇ ಹಂತದ GRAP ಅಡಿಯಲ್ಲಿ ನಿರ್ಬಂಧಗಳನ್ನು ಜಾರಿಗೊಳಿಸಿದೆ.
ನಿರ್ಮಾಣ ಚಟುವಟಿಕೆಗಳ ನಿಷೇಧ ಮತ್ತು BS-III ಪೆಟ್ರೋಲ್ ಮತ್ತು BS-IV ಡೀಸೆಲ್ ವಾಹನಗಳ ಬಳಕೆಗೆ ನಿರ್ಬಂಧಿಸಲಾಗಿದೆ. ಶುಕ್ರವಾರ ಬೆಳಗ್ಗೆ 8 ಗಂಟೆಗೆ ನಿರ್ಬಂಧಗಳು ಜಾರಿಗೆ ಬರಲಿವೆ.
ಮಾಲಿನ್ಯದ ಅಪಾಯಕಾರಿ ಮಟ್ಟಗಳ ಕಾರಣ, ಮುಂದಿನ ಆದೇಶದವರೆಗೆ ಪ್ರಾಥಮಿಕ ಶಾಲೆಗಳಿಗೆ ದೈಹಿಕ ತರಗತಿಗಳನ್ನು ನಡೆಸಲಾಗುವುದಿಲ್ಲ, ಆದರೆ ಆನ್ಲೈನ್ ತರಗತಿಗಳನ್ನು ಮುಂದುವರಿಸಬಹುದು ಎಂದು ದೆಹಲಿ ಸರ್ಕಾರ ಘೋಷಿಸಿದೆ.