ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಚಾಲಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಭಾನುವಾರ ತಳ್ಳಿಹಾಕಿದ್ದಾರೆ.
ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಕೇಜ್ರಿವಾಲ್ ಅವರು, ದೆಹಲಿಯಲ್ಲಿ ತಮ್ಮ ಪಕ್ಷ ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದರು.
ಎಎಪಿ ಮತ್ತು ಕಾಂಗ್ರೆಸ್ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಭಾಗವಾಗಿವೆ ಮತ್ತು ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆಗೆ ದೆಹಲಿಯಲ್ಲಿ ಮೈತ್ರಿ ಮಾಡಿಕೊಂಡಿದ್ದವು.
ಕಳೆದ ಅಕ್ಟೋಬರ್ನಲ್ಲಿ ನಡೆದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹಲವು ಸುತ್ತಿನ ಮಾತುಕತೆಗಳ ಹೊರತಾಗಿಯೂ ಎಎಪಿ ಮತ್ತು ಕಾಂಗ್ರೆಸ್ ಸೀಟು ಹಂಚಿಕೆ ಒಪ್ಪಂದಕ್ಕೆ ಬರಲು ಸಾಧ್ಯವಾಗಲಿಲ್ಲ. ಹೀಗಾಗಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧಿಸಿದ್ದವು.