ದೊಡ್ಡಬಳ್ಳಾಪುರ: ಅರಳುಮಲ್ಲಿಗೆ ವ್ಯವಸಾಯ ಸೇವಾ ಸಹಕಾರ ಸಂಘ ನಿಯಮಿತ ವತಿಯಿಂದ ನಡೆದ ಸರ್ವಸದಸ್ಯರ ವಾರ್ಷಿಕ ಮಹಾ ಸಭೆ ಹಾಗೂ 10ನೇ ತರಗತಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ 2023-2024ನೇ ಸಾಲಿನ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ತಾಲ್ಲೂಕಿನ ಅರಳು ಮಲ್ಲಿಗೆ ಗ್ರಾಮದಲ್ಲಿ ಅಯೋಜಿಸಲಾಗಿದ್ದ ವ್ಯವಸಾಯ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯ ಕುರಿತು ಮಾತನಾಡಿದ ಸಂಘದ ಅಧ್ಯಕ್ಷ ವೆಂಕಟೇಶ್ ಅವರು ಸಣ್ಣ ರೈತರಿಗೆ ಕನಿಷ್ಟ ಒಂದು ಎಕರೆ ಜಮೀನನ್ನು ಹೊಂದಿರುವ ರೈತರಿಗೆ ಕುರಿ, ಕೋಳಿ, ಮೇಕೆ ಸಾಕಾಣಿಕೆಗೆ ರೂ. 15ಲಕ್ಷ ಗಳವರಿಗೆ ನೇರವಾಗಿ ಸಾಲವನ್ನು ಸಂಘದ ವತಿಯಿಂದ ನೀಡಲಾಗುವುದು ಇದರ ಸದುಪಯೋಗ ಪಡಿಸಿಕೊಳ್ಳಲು ಬೇಕೆಂದು ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರಶಂಸಾ ಪತ್ರ ನೀಡಿ ಶುಭಾಹಾರೈಸಿದ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅದ್ಯಕ್ಷ ಚುಂಚೆಗೌಡ ಅವರು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ಎಲ್ಲಾ ರೀತಿಯಲ್ಲಿ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಹೊಂದಿರಬೇಕು ಎಂದರು.ಈ ಕಾರ್ಯಕ್ರಮದಲ್ಲಿ ಅರಳು ಮಲ್ಲಿಗೆ ವ್ಯವಸಾಯ ಸೇವಾ ಸಹಕಾರ ಸಂಘದ ಕಾರ್ಯದರ್ಶಿ ರಮೇಶ್, ನಿರ್ದೇಶಕರುಗಳು, ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.