ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಮತ್ತು 16 ಜನ ಆರೋಪಿಗಳ ವಿರುದ್ಧ ಕೊಲೆ ಮುಖದ್ದಮೆ ದಾಖಲಾಗಿದ್ದ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು 24ನೇ ಎಸಿ ಎಂ ಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಇಂದು ಸಲ್ಲಿಸಿರುತ್ತಾರೆ.
ಕಾಮಾಕ್ಷಿಪಾಳ್ಯ ಪೊಲೀಸರು ಇಲ್ಲಿಯವರಿಗೆ ತನಿಖೆಯಲ್ಲಿ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷಾಧಾರಗಳಿಂದ 17 ಆರೋಪಿತರ ವಿರುದ್ಧ 24ನೇ ಎಸ್ಸಿಎಂ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಈ ದೋಷಾರೋಪಣ ಪಟ್ಟಿಯಲ್ಲಿ 231 ಸಾಕ್ಷಾಧಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳ್ಳ 7 ಸಂಪುಟಗಳ 10 ಕಡೆತಗಳನ್ನು ಒಳಗೊಂಡಿರುತ್ತದೆ.
ಈ ಪ್ರಕರಣದ ತನಿಖೆಯನ್ನು ಪೊಲೀಸ್ ಕಮಿಷನರ್ ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಮತ್ತು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ರವರ ಮಾರ್ಗದರ್ಶನದಲ್ಲಿ, ವಿಜಯನಗರ ಎಸಿಪಿ ಚಂದನ್ ಕುಮಾರ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ತಂಡ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಮತ್ತು ಆರೋಪಿಗಳ ವಿರುದ್ಧ ದೋಷಾರೋಪಣ ಪಟ್ಟಿಯನ್ನು ತಯಾರಿಸಿ ಸಲ್ಲಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಇನ್ನೂ ಹೆಚ್ಚಿನ ತನಿಖೆಯನ್ನು ಕೈಗೊಂಡು ಸಂಗ್ರಹವಾಗುವ ಸಾಕ್ಷಾಧಾರಗಳನ್ನು ಕಲಂ 178/8ಛಿಡಿಠಿಛಿ ಅಡಿಯಲ್ಲಿ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು.
ಸಾಕ್ಷಾಧಾರರ ವಿವರಗಳು: ಪ್ರತ್ಯಕ್ಷ ಸಾಕ್ಷಿದಾರರು ಮೂರು ಜನ, ಎಫ್ಎಸ್ಎಲ್ / ಸಿ ಎಸ್ ಎಸ್ ಎಲ್ 8, 161 ಮತ್ತು 164 97 (27 ಜನ 164 ಸಿಆರ್ಪಿಸಿ ಅಡಿಯಲ್ಲಿನ ಸಾಕ್ಷಿದಾರರು ಸೇರಿದಂತೆ ), ಪಂಚರು 59, ಇತರೆ ಸರ್ಕಾರಿ ಅಧಿಕಾರಿಗಳು ( ತಾಸಿಲ್ದಾರ್, ವೈದ್ಯರು, ಆರ್ ಟಿ ಓ, ಅಭಿಯಂತರರು 8, ಪೊಲೀಸರು 56, ಒಟ್ಟು ಸಾಕ್ಷಿಗಳು 231. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.