ಬೆಂಗಳೂರು: ಪೊಲೀಸರು ಎಂದು ಕರ್ತವ್ಯದಲ್ಲಿ ಧೃತಿಗೆಡದೆ ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸಬೇಕೆಂದು ಮಾಜಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಐ ಎಸ್ ಡಿ ಮುಖ್ಯಸ್ಥರಾಗಿ ನಿವೃತ್ತರಾದ ಪ್ರತಾಪ್ ರೆಡ್ಡಿರವರು 2024ನೇ ಬೆಂಗಳೂರು ನಗರ ಪೊಲೀಸ್ ಕ್ರೀಡಾಕೂಟ ಇಂದು ಬೆಳಿಗ್ಗೆ ಆಡುಗೋಡಿಯ ಸಿಆರ್ ಮೈದಾನದಲ್ಲಿ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿಗೆ ಸೈಬರ್ ಅಪರಾಧ ಪ್ರಕರಣಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ತಂತ್ರಜ್ಞಾನದ ಮೂಲಕ ಅಪರಾಧಿಗಳನ್ನು ಪತ್ತೆ ಮಾಡಿ ಸಾರ್ವಜನಿಕರಿಗೆ ನಮ್ಮ ಕರ್ತವ್ಯ ನಿಷ್ಠೆಯನ್ನು ತೋರಿಸಬೇಕೆಂದು ತಿಳಿಸಿದರು.
ನಗರ ಪೊಲೀಸ್ ಆಯುಕ್ತ ದಯಾನಂದ್ ಹೆಚ್ಚುವರಿ ಪೊಲೀಸ್ ಆಯುಕ್ತರು ಹಾಗೂ ಜಂಟಿ ಪೊಲೀಸ್ ಆಯುಕ್ತರು ಸೇರಿದಂತೆ ಎಲ್ಲಾ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಮತ್ತು ಕ್ರೀಡಾಕೂಟದ ಸಮಾರೋಪ ಕಾರ್ಯಕ್ರಮಕ್ಕೆ ಗೃಹಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ರವರು ಆಗಮಿಸಲಿದ್ದಾರೆ, ಗೆದ್ದ ಕ್ರೀಡಾಪಟುಗಳಿಗೆ ಪ್ರಶಸ್ತಿಗಳನ್ನು ಸಹ ನೀಡಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.