ಮಂಗಳೂರು: ವ್ಯಕ್ತಿಯೋರ್ವ ಸಹಕಾರ ಸಂಘದಲ್ಲಿ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ವಂಚನೆ ಮಾಡಿರುವ ಪ್ರಕರಣ ನಡೆದಿದೆ.ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ.
500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಅಬೂಬಕ್ಕರ್ ಸಿದ್ದಿಕ್ 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಅಬೂಬಕ್ಕರ್ ಸಿದ್ದಿಕ್, ಬ್ಯಾಂಕ್ ಆಡಳಿತ ಮಂಡಳಿ ಮತ್ತು ನೌಕರರ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಚಿನ್ನಪರೀಕ್ಷೆ ಮಾಡುವ ಸರಪ ಸೇರಿದಂತೆ ಒಟ್ಟು 28 ಮಂದಿ ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಚಿನ್ನ ಅಡವಿಟ್ಟಿರುವ ಆರೋಪಿ ಅಬೂಬಕ್ಕರ್ ಸಿದ್ದಿಕ್ ಸಧ್ಯಕ್ಕೆ ತಲೆಮರೆಸಿಕೊಂಡಿದ್ದಾರೆ. ಆತನಿಗಾಗಿ ಶೋಧ ಕಾರ್ಯ ನಡೆದಿದೆ.