ಬೆಂಗಳೂರು: ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಅವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಕಳೆದ ನಾಲ್ಕು ದಿನಗಳಿಂದ ನಕ್ಸಲ್ ನಿಗ್ರಹಪಡೆಯವರಿಂದ ಶೋಧ ಕಾರ್ಯ ನಡೆಯುತ್ತಿದೆ.
ಶೃಂಗೇರಿ ತಾಲೂಕಿನ ಸುತ್ತಿನಗುಡ್ಡ, ಕೆರೆಕಟ್ಟೆ ಅರಣ್ಯಪ್ರದೇಶದಲ್ಲಿ ಐವರು ನಕ್ಸಲರು ಕಾಣಿಸಿಕೊಂಡರು ಎಂಬ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.