ಬೆಂಗಳೂರು: ಸಮಾಜದ ಮುಖ್ಯವಾಹಿನಿಗೆ ಬರಲು ಶರಣಾಗುವುದಾಗಿ ತಿಳಿಸಿದ್ದ ಆರು ಮಂದಿ ನಕ್ಸಲರು ಇಂದು ಬೆಂಗಳೂರಿನಲ್ಲಿ ಗೃಹ ಸಚಿವರ ನಿವಾಸದಲ್ಲಿ ಶರಣಾಗಿದ್ದಾರೆ.
6 ಮಂದಿ ನಕ್ಸಲರು ಇಂದು ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶರಣಾಗಲಿದ್ದಾರೆ ಎಂದು ಹೇಳಲಾಗಿತ್ತು.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಹಾಗೂ ಪ್ರವಾಸಿ ಮಂದಿರ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಾಡು ಮಾಡಲಾಗಿತ್ತು. ಬದಲಾದ ಪರಿಸ್ಥಿತಿಯಲ್ಲಿ ನಕ್ಸಲರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಹಾಗೂ ಗೃಹಸಚಿವರ ಮುಂದೆಯೇ ಶರಣಾಗಲಿದ್ದಾರ ಎಂದು ತಿಳಿದುಬಂದಿದ್ದ, ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರು ಅವರನ್ನು ಕರೆ ತರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.