ಬೆಂಗಳೂರು: ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು, ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಅಪರಿಚಿತ ವ್ಯಕ್ತಿ ದೀಪಿಕಾ ದಾಸ್ ತಾಯಿಗೆ ಮಧ್ಯರಾತ್ರಿ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ.
ಮಾದನಾಯಕನಹಳ್ಳಿಯಲ್ಲಿ ನಟಿ ದೀಪಿಕಾ ದಾಸ್ ಮನೆ ಇದ್ದು, ದೀಪಿಕಾದಾಸ್ ತಾಯಿ ಪದ್ಮಲತಾಗೆ ಬೆದರಿಕೆ ಹಾಕಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆದರಿಕೆ ಹಾಕಿದ ಕಿಡಿಗೇಡಿಗಾಗಿ ಮಾದನಾಯಕನಹಳ್ಳಿ ಪೊಲೀಸರ ಹುಡುಕಾಟ ನಡೆಸಿದಿದ್ದಾರೆ.
ದೀಪಿಕಾ ದಾಸ್ ತಾಯಿ ಪದ್ಮಲತಾ ದಾಖಲಿಸಿದ ಎಫ್ಐಆರ್ನಲ್ಲಿ, ನನ್ನ ಮಗಳು ಚಲನಚಿತ್ರ ನಟಿಯಾಗಿದ್ದು,8 ತಿಂಗಳ ಹಿಂದೆ ದೀಪಕ್ ಕುಮಾರ್ ಎನ್ನುವವರ ಜೊತೆ ವಿವಾಹವಾಗಿರುತ್ತಾಳೆ. ಮಗಳು ಮತ್ತು ಅಳಿಯ 1 ತಿಂಗಳ ಹಿಂದೆ ಇಂಗ್ಲೆಂಡ್ ಪ್ರವಾಸಕ್ಕೆ ಹೋಗಿದ್ದರು. ಹೀಗೆ ಅಪರಿಚಿತ ವ್ಯಕ್ತಿಯೊಬ್ಬ ನನಗೆ ಫೋನ್ ಮಾಡಿ ನಿಮ್ಮ ಮಗಳಿಗೆ ಯಾಕೆ ಮದುವೆ ಮಾಡಿದ್ರಿ.
ನಿಮ್ಮ ಅಳಿಯ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ಜನರಿಗೆ ಮೋಸ ಮಾಡಿರುತ್ತಾನೆ ಎಂದಿದ್ದ. ನಾನು ಹಾಗೇನಾದ್ರು ಇದ್ರೆ ಕಾನೂನಾತ್ಮಕವಾಗಿ ದೂರು ನೀಡಿ ಎಂದು ಹೇಳಿದ್ದೆ. ಕೆಲವು ದಿನಗಳ ನಂತರ ನನ್ನ ಮಗಳು ದೀಪಿಕಾ ದಾಸ್ ಗೆ ಕರೆ ಮಾಡಿದ್ದ. ನಿಮ್ಮ ಯಾಜಮಾನರು ಅಕ್ರಮ ಚಟುವಟಿಕೆಗಳಿಂದ ಬಡಾವಣೆ ಮೋಸ ಮಾಡಿದ್ದು ನಿಮಗೆ ತಿಳಿದಿಲ್ಲವೆ. ನೀವು ಪುನೀತ್ ರಾಜ್ ಕಾಮಾರ್ ಸಮಾಧಿ ಬಳಿ ಆಣೆ ಮಾಡುವಂತೆ ಕೇಳಿದ್ದ. ಅದಕ್ಕೆ ಈ ಆರೋಪಗಳೆಲ್ಲ ಸುಳ್ಳು ಇದಕ್ಕೆ ಪುನೀತ್ ರಾಜ್ ಕುಮಾರ್ ಹೆಸರು ತರಬೇಡಿ ಎಂದಿದ್ದಳು. ನೀವೂ ಕಾನೂನು ರೀತಿ ದೂರು ನೀಡಿ ಎಂದು ಹೇಳಿರುತ್ತಾಳೆ. ನಿಮ್ಮ ಹೆಸರಿಗೆ ಧಕ್ಕೆ ತರುತ್ತೇನೆ. ನನಗೆ ಹಣ ನೀಡಿ ಎಂದಿದ್ದ. ಹಣ ನೀಡದೆ ಇದ್ದರೆ ನಿಮ್ಮ ಹೆಸರು ಬರೆದು ಅತ್ಮಹತ್ಯೆ ಮಾಡಿಕೊಳ್ಳೋದಾಗಿ ಬೆದರಿಸಿದ್ದ.
ನನ್ನ ಮಗಳು ಮತ್ತು ಅಳಿಯನ ಘನತೆಗೆ ಧಕ್ಕೆ ತರುವ ಪ್ರಯತ್ನ ಮಾಡಿರುತ್ತಾನೆ. ಪದೇ ಪದೇ ಫೋನ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟು, ಸಾಯೋದಾಗಿ ಬೆದರಿಕೆ ಇಟ್ಟಿದ್ದಾನೆ. ಬೆದರಿಕೆ ಹಾಕುತ್ತಿದ್ದವ ಯಶವಂತ ಎಂಬುದಾಗಿ ತಿಳಿದುಬಂದಿದ್ದು, ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.